ಊಟಕ್ಕಾಗಿ ಮನೆಗೆ ತೆರಳುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಎದುರುಗಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚನ್ನರಾಯಪಟ್ಟಣ ನಗರದ ಎಪಿಎಂಸಿ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಡಿಕ್ಕಿಯ ತೀವ್ರತೆಗೆ ಬೈಕ್ ಸಮೇತ ಬೀರಲಿಂಗ ರಸ್ತೆಗೇರುಳಿದ್ದು ಗಂಭೀರ ಗಾಯಗಳಿಂದ ಪ್ರಾಣ ಕಳೆದುಕೊಂಡರು. ಮೃತರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದ ಬಳಿಕ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಚನ್ನರಾಯಪಟ್ಟಣ: ಪಟ್ಟಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೀರಲಿಂಗ (೪೧) ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಶುಕ್ರವಾರ ಊಟಕ್ಕಾಗಿ ಮನೆಗೆ ತೆರಳುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಎದುರುಗಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚನ್ನರಾಯಪಟ್ಟಣ ನಗರದ ಎಪಿಎಂಸಿ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಡಿಕ್ಕಿಯ ತೀವ್ರತೆಗೆ ಬೈಕ್ ಸಮೇತ ಬೀರಲಿಂಗ ರಸ್ತೆಗೇರುಳಿದ್ದು ಗಂಭೀರ ಗಾಯಗಳಿಂದ ಪ್ರಾಣ ಕಳೆದುಕೊಂಡರು.ಮೃತರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದ ಬಳಿಕ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಈ ದುರ್ಘಟನೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕರ್ತವ್ಯನಿರತ ಪೊಲೀಸರ ಅಕಾಲಿಕ ಸಾವಿಗೆ ಪೊಲೀಸ್ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.