ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ

| Published : Sep 21 2024, 01:51 AM IST

ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ

ಯಲ್ಲಪ್ಪ ಬಂಡಿ ಅವರು ವಿದ್ಯಾರ್ಥಿಗಳ ಕುಡಿಯುವ ನೀರಿನ ವ್ಯವಸ್ಥೆಗಾಗಿ ₹ 1 ಲಕ್ಷ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು ವ್ಯವಸ್ಥೆ ಇಲ್ಲ ಎನ್ನುವುದು ಗೊತ್ತಾಗುತ್ತಿದ್ದಂತೆ ತಮ್ಮ ತಂದೆ ಸಣ್ಣ ಭೀಮಪ್ಪ ಅವರ ಸ್ಮರಣಾರ್ಥವಾಗಿ ₹1 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯೋಪಾಧ್ಯಾಯರಾಗಿ ಬಡ್ತಿ: ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲಭಾಷೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಅವರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿಯಾಗಿದೆ. ಹೀಗಾಗಿ, ತಾಲೂಕಿನ ಅಳವಂಡಿಯ ಈ ಪ್ರೌಢಶಾಲೆಯಲ್ಲಿ ಶುಕ್ರವಾರ ಅಧಿಕಾರಿ ವಹಿಸಿಕೊಂಡರು. ಬಳಿಕ ಸನ್ಮಾನ ಸ್ವೀಕಾರ ಮಾಡಿ ಮಾತನಾಡುವ ವೇಳೆಯಲ್ಲಿ ಈ ಘೋಷಣೆ ಮಾಡಿದರು.

ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರಹುಸೇನ್ ಕುಕನೂರು, ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ್, ಮಾರ್ತಂಡರಾವ್ ದೇಸಾಯಿ, ರಾಮಣ್ಣ ಬಾರಕೇರ, ಶಿವಾನಂದಯ್ಯ, ಮೈಲಾರಗೌಡ , ಭೀಮನಗೌಡ ಪೊಲೀಸ್ ಪಾಟೀಲ್, ದೇವಪ್ಪ ಭಚಕ್ಕನವರು, ಎಸ್‌ಡಿಎಂಸಿ ಶಂಕರಪ್ಪ ಕರಡಿ, ಗ್ಯಾನಪ್ಪ ಹಳ್ಳಿಕೇರಿ, ಗುರುಬಸವರಾಜ ವಕೀಲರು ಇದ್ದರು.