ಸಾರಾಂಶ
ಸುಂಟಿಕೊಪ್ಪದ ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್ ಅವರಿಗೆ ಸಂತ ಅಂತೋಣಿ ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಸುಂಟಿಕೊಪ್ಪದ ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಜೋವಿಟಾ ವಾಸ್ ಅವರಿಗೆ ಸಂತ ಅಂತೋಣಿ ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೆ.14 ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೃತ್ಯುಂಜಯ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ಉತ್ತಮ ಶಿಕ್ಷಕಿ ರಾಜ್ಯಮಟ್ಟ ಪ್ರಶಸ್ತಿಗೆ ಭಾಜನರಾಗಿರುವ ಜೋವಿಟಾವಾಸ್ ಅವರನ್ನು ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್, ಸಂತ ಕ್ಲಾರ ಕನ್ಯಾಸ್ತ್ರಿಮಠದ ಕನ್ಯಾಸ್ತ್ರಿಯರು, ದೇವಾಲಯದ ಪಾಲನ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಅವರ ಸೇವೆ ಹಾಗೂ ಸಾಧನೆಯನ್ನು ಸ್ಮರಿಸಿ ಸನ್ಮಾನಿಸಿ ಗೌರವಿಸಿದರು.