ಮನುಷ್ಯನಿಗೆ ಇಂದು ಬಳಸುವ ಅನೇಕ ಬಗೆಯ ಸವಲತ್ತುಗಳು ಆತನ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೇಹದ ಅಂಗಾಂಗಗಳ ರಚನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ. ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಉಡುಪಿ: ಮನುಷ್ಯನಿಗೆ ಇಂದು ಬಳಸುವ ಅನೇಕ ಬಗೆಯ ಸವಲತ್ತುಗಳು ಆತನ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೇಹದ ಅಂಗಾಂಗಗಳ ರಚನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ. ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಕುಂಜಿಬೆಟ್ಟಿನ ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಗಳ ಆಶ್ರಯದಲ್ಲಿ ನಡೆದ ಉಚಿತ ಫ್ಯಾಟಿ ಲಿವರ್, ಕಣ್ಣು ತಪಾಸಣೆ ಮತ್ತು ಮಾಹಿತಿ ಶಿಬಿರ ಉದ್ಗಾಟಿಸಿ ಮಾತಾನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ. ಜಿ. ಅವರು ಫ್ಯಾಟಿ ಲಿವರ್ ಸಮಸ್ಯೆಯ ವಿಚಾರಗಳನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಅಭಿನಯ್ ಕಣ್ಣಿನ ಆರೋಗ್ಯದ ಕುರಿತಾದ ಮಾಹಿತಿ ನೀಡಿದರು. ಕೃಷಿತಜ್ಞ ಮುರಳೀಧರ್ ಭಟ್ ಅವರು ಆರೋಗ್ಯ ಮತ್ತು ಪ್ರಕೃತಿಗಿರುವ ಸಂಬಂಧ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್‌ನ ಅಧ್ಯಕ್ಷ ಪುರುಷೋತ್ತಮ ನಾಯಕ್, ನಿಯೋಜಿತ ಅಧ್ಯಕ್ಷ ರಾಮಚಂದ್ರ ಪಾಟ್ಕರ್, ಕಾರ್ಯದರ್ಶಿ ಜೀವನ್ ಶೆಟ್ಟಿ ವಿಠ್ಠಲ್ ಕಾಂಚನ್ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಲಯನ್ಸ್ ಖಜಾಂಚಿ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು. ನೂರಕ್ಕೂ ಹೆಚ್ಚು ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.