ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ ಪೂರ್ವಭಾವಿ ಸಭೆ

| Published : Dec 12 2024, 12:33 AM IST

ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ ಪೂರ್ವಭಾವಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಸ್ಥಾಪಿಸುವ ನಿಟ್ಟಿನಲ್ಲಿ ಆರೋಗ್ಯ ಶಿಬಿರ ಮತ್ತು ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ೨೨ರಂದು ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ನಾಲ್ಕು ತಂಡಗಳಿಗೆ ಆಡಲು ಅವಕಾಶ ಮಾಡಿಕೊಡಲಾಗಿದೆ. ವಿಜೇತ ತಂಡಕ್ಕೆ ಟ್ರೋಪಿ ಮತ್ತು ನಗದು ಬಹುಮಾನ ವಿತರಿಸಲಾಗುವುದು. ಈ ನಿಟ್ಟಿನಲ್ಲಿ ನಾಲ್ಕು ತಂಡಗಳನ್ನು ರಚಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ಇಂದಿಗೂ ಗ್ರಾಮೀಣ ಭಾಗಗಳಲ್ಲಿ ಪತ್ರಕರ್ತರು ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ. ಪತ್ರಕರ್ತರ ಇಂದಿಗೂ ಸಂಕಷ್ಟದ ಜೀವನ ನಡೆಸುತ್ತಿದ್ದು, ಅವರಿಗೆ ಆರ್ಥಿಕ ನೆರವನ್ನು ನೀಡುವ ನಿಟ್ಟಿನಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಆರೋಗ್ಯ ಶಿಬಿರ ಮತ್ತು ಕ್ರೀಡೆಯಿಂದ ಉಳಿಕೆ ಹಣವನ್ನು ಠೇವಣಿಯಾಗಿರಿಸಿ, ಅದರಲ್ಲಿ ಬರುವ ಬಡ್ಡಿ ಹಣ ಬಳಸಿಕೊಂಡು ನೆರವು ನೀಡುವ ಉದ್ದೇಶದೊಂದಿಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಜಿ.ವಿ. ರವಿಕುಮಾರ್, ಸುರೇಶ್ ಬಿಳಿಗೇರಿ, ಕುಡೆಕಲ್ ಸಂತೋಷ್, ತಾಲೂಕು ಸಮಿತಿಯ ಕವನ್ ಕಾರ್ಯಪ್ಪ, ಲೋಕೇಶ್, ದುಷ್ಯಂತ್ ಕುಮಾರ್, ಟಿ.ಜೆ. ಪ್ರವೀಣ್, ಖಲೀಲ್ ಮತ್ತಿತರರಿದ್ದರು.