ಯುವಕರಲ್ಲಿ ಆರೋಗ್ಯ ಕಾಳಜಿ ಅಗತ್ಯ

| Published : Sep 30 2025, 12:00 AM IST

ಸಾರಾಂಶ

ಯುವಕರ ಬಗ್ಗೆ ಕಾಳಜಿ ವಹಿಸುವುದು ತುಂಬಾ ಅವಶ್ಯಕತೆ ಇರುತ್ತದೆ. ಆದ್ದರಿಂದ ಜನರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಳ್ಳುವುದು ಉತ್ತಮ

ಕನ್ನಡಪ್ರಭ ವಾರ್ತೆ ಶಿರಾ

ಭಾರತೀಯ ಜನತಾ ಪಾರ್ಟಿ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಬಡವರು, ಸಾಮಾಜಿಕ ಸವಲತ್ತು ಪಡೆಯದ ಮತ್ತು ವಂಚಿತ ವರ್ಗಗಳ ಉನ್ನತಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಯವರ ನೇತೃತ್ವದಲ್ಲಿ ಅವರ ಅಪ್ರತಿಮ ಸೇವೆಯೇ ಪರಮ ಧರ್ಮ ಎಂಬ ಮನೋಭಾವದಿಂದ ಆರೋಗ್ಯ ಶಿಬಿರ ವನ್ನು ಆಯೋಜಿಸಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷ ಚಿದಾನಂದ್ ಎಂ. ಗೌಡ ಹೇಳಿದರು.

ಅವರು ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಒತ್ತಡದ ದಿನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ತುಂಬಾ ಕಷ್ಟವಾಗಿರುತ್ತದೆ ಸುಮಾರು ಯುವ ಶಕ್ತಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ಸಾವಿಗೀಡಾಗಿರುವವರ ಸಂಖ್ಯೆ ಬಹಳಷ್ಟಿದೆ. ಯುವಕರ ಬಗ್ಗೆ ಕಾಳಜಿ ವಹಿಸುವುದು ತುಂಬಾ ಅವಶ್ಯಕತೆ ಇರುತ್ತದೆ. ಆದ್ದರಿಂದ ಜನರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಳ್ಳುವುದು ಉತ್ತಮ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಾಂತರಾಜು ಅರಸು, ಯುವ ಮೋರ್ಚಾ ಅಧ್ಯಕ್ಷ ಹರೀಶ್, ನಗರ ಘಟಕದ ಅಧ್ಯಕ್ಷ ಸ್ನೇಹಪ್ರಿಯ ಶಿವು, ಓಬಿಸಿ ಮೋರ್ಚಾ ಅಧ್ಯಕ್ಷ ಮದ್ದಕ್ಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಎಸ್. ಟಿ ಮೋರ್ಚಾ ಅಧ್ಯಕ್ಷ ತೇಜಶ್ವರ್ ತಾಲೂಕು ಉಪಾಧ್ಯಕ್ಷ ನಾಗರಾಜ್ ಗೌಡ, ಬೊಪ್ಪರಾಯಪ್ಪ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಕುಮಾರ್ ಮಾಸ್ಟರ್ ನಗರ ಮಹಿಳಾ ಘಟಕದ ಅಧ್ಯಕ್ಷ ನಾಗರತ್ನಮ್ಮ , ಕವಿತಾ, ಬಿಜೆಪಿ ಮುಖಂಡ ಮದಕ್ಕನಹಳ್ಳಿ ರಂಗನಾಥ್, ಗ್ರಾಮ ಪಂಚಾಯತಿ ಸದಸ್ಯ ಶಿವಲಿಂಗಪ್ಪ , ನಗರ ಮೋರ್ಚಾದ ಲೋಕೇಶ್ ಮುನಿರಾಜ್, ಸೈಯದ್ ಬಾಬಾ, ಗುಂಡಯ್ಯ ಸೇರಿದಂತೆ ಮೋರ್ಚಾ ಪದಾಧಿಕಾರಿಗಳು ಮುಖಂಡರು, ಯುವಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.

೨೯ಶಿರಾ೨: ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ವಿಧಾನ ಪರಿಷತ್ ಶಾಸಕ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷ ಚಿದಾನಂದ್ ಎಂ. ಗೌಡ ಶಿಬಿರವನ್ನು ಉದ್ಘಾಟಿಸಿದರು.