ವಿರಾಜಪೇಟೆ ಪಟ್ಟಣದ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗುತ್ತಿದ್ದು, ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ವಿರಾಜಪೇಟೆ
ವಿರಾಜಪೇಟೆ ಪಟ್ಟಣದ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗುತ್ತಿದ್ದು, ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ವಿರಾಜಪೇಟೆಯ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಚಿಕಿತ್ಸೆ, ವಿರಾಜಪೇಟೆಯ ಡಾ. ಅಗರವಾಲ್ಸ್ ಕ್ಲಿನಿಕ್ ಸಹಯೋಗದಲ್ಲಿ ಕಣ್ಣಿನ ತಪಾಸಣಾ ಶಿಬಿರ, ಕ್ರೆಡೋ ಮೆಡಿಕಲ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ನ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಜರುಗಿತು.
ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಪ್ರಯುಕ್ತ ಆರೋಗ್ಯ ಜಾಗೃತಿ ಕಾರ್ಯಕ್ರಮದಡಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಶಿಬಿರಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಗ್ರಾಮಸ್ಥರು ಈ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ, ದಂತ ಹಾಗೂ ಕಣ್ಣಿನ ತಪಾಸಣೆಯನ್ನು ಮಾಡಿಸಿದರು. ಎನ್ ಎಸ್ ಎಸ್ ಶಿಬಿರಾರ್ಥಿಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿದರು. ಈ ಸಂದರ್ಭ ಸೈಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಎನ್ ಎಸ್ ಎಸ್ ಶಿಬಿರಾಧಿಕಾರಿ ಬಿ. ಎನ್. ಶಾಂತಿಭೂಷಣ್, ಕೊಡಗು ದಂತ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ. ಪ್ರವೀಣ ಪಿ. ಗಾಂವ್ಕರ್, ಕ್ರೆಡೋ ಮೆಡಿಕಲ್ ಪ್ರೈವೇಟ್ ಲಿಮಿಟೆಡ್ ನ ವೈದ್ಯರಾದ ಡಾ. ರಕ್ಷಾ, ಡಾ. ಅಗರ್ವಾಲ್ ಕ್ಲಿನಿಕ್ ನ ನಿರ್ವಾಹಕರಾದ ಅರ್ಜುನ್ ದೇವಯ್ಯ, ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ ಮತ್ತಿತರರಿದ್ದರು.