ಸಾರಾಂಶ
ಶ್ರೀ ಬಾಹುಬಲಿ ಆಸ್ಪತ್ರೆ ಶ್ರವಣಬೆಳಗೊಳ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಹಾಗೂ ರೋಟರಿ ಕ್ಲಬ್ ಚನ್ನರಾಯಪಟ್ಟಣ ವತಿಯಿಂದ ಮತ್ತು ಲಯನ್ಸ್ ಕ್ಲಬ್ ಮೈಸೂರು ಕ್ಲಾಸಿಕ್ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮದಲ್ಲಿ ಸುಮಾರು ೨೦೦ ಜನರಿಗೆ ಕಣ್ಣಿನ ತಪಾಸಣೆ, ಬಾಯಿ ಕ್ಯಾನ್ಸರ್ ತಪಾಸಣೆ, ಅಕ್ಯು ಪಂಚರ್ ಟ್ರೀಟ್ಮೆಂಟ್ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಶ್ರೀ ಬಾಹುಬಲಿ ಆಸ್ಪತ್ರೆ ಶ್ರವಣಬೆಳಗೊಳ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಹಾಗೂ ರೋಟರಿ ಕ್ಲಬ್ ಚನ್ನರಾಯಪಟ್ಟಣ ವತಿಯಿಂದ ಮತ್ತು ಲಯನ್ಸ್ ಕ್ಲಬ್ ಮೈಸೂರು ಕ್ಲಾಸಿಕ್ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಭರತ್ ಕುಮಾರ್ ಎಚ್ ಜಿ ಹಾಗೂ ಅಧ್ಯಕ್ಷರು ಲಯನ್ಸ್ ಕ್ಲಬ್ ಮತ್ತು ಆಸ್ಪತ್ರೆ ವೈದ್ಯರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸುಮಾರು ೨೦೦ ಜನರಿಗೆ ಕಣ್ಣಿನ ತಪಾಸಣೆ, ಬಾಯಿ ಕ್ಯಾನ್ಸರ್ ತಪಾಸಣೆ, ಅಕ್ಯು ಪಂಚರ್ ಟ್ರೀಟ್ಮೆಂಟ್ ನೀಡಲಾಯಿತು.
ಈ ಸಂದರ್ಭದಲ್ಲಿ ರಕ್ತದಾನ ಶಿಬಿರದ ಬಗ್ಗೆ ಮಾತನಾಡಿದ ಭರತ್ ಕುಮಾರ್ ಎಚ್ ಜಿ. ಜಿಲ್ಲೆಯಲ್ಲಿ ಅತಿ ಹೆಚ್ಚು ರಕ್ತದ ಅವಶ್ಯಕತೆ ಇರುವುದರಿಂದ ರಕ್ತ ಹೀನತೆಯಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತವನ್ನು ಒದಗಿಸಲು ರಕ್ತ ನಿಧಿಗಳಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಬೇಕು. ಶಿಬಿರಗಳಲ್ಲಿ ಅತಿ ಹೆಚ್ಚು ರಕ್ತವು ದೊರಕಿದರೆ ರೋಗಿಗಳಿಗೆ ರಕ್ತ ನೀಡಲು ಅನುಕೂಲವಾಗುತ್ತದೆ. ಆದ ಕಾರಣ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಬೇಕಾಗಿ ವಿನಂತಿಸಿಕೊಂಡರು.