ಚಿಲುಮೆ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರ

| Published : Aug 09 2024, 12:33 AM IST

ಚಿಲುಮೆ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ರೋಗ್ಯವೇ ಭಾಗ್ಯ ಎಂಬ ಘೋಷಣೆಯಂತೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಾಗಿಟ್ಟುಕೊಂಡು ಕಾಪಾಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮೇಲುಕೋಟೆ ಯೋಜನಾಧಿಕಾರಿಗಳ ಕಚೇರಿಯ ನರಹಳ್ಳಿ ಕಾರ್ಯ ಕ್ಷೇತ್ರದಲ್ಲಿನ ಚಿಲುಮೆ ಜ್ಞಾನ ವಿಕಾಸ ಕೇಂದ್ರದಲ್ಲಿ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮುರುಳೀಧರ್ ಹಾಗೂ ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಬಸವರಾಜ್ ಉದ್ಘಾಟಿಸಿದರು.

ನಂತರ ಜಿಲ್ಲಾ ನಿರ್ದೇಶಕ ಮುರಳೀಧರ್ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬ ಘೋಷಣೆಯಂತೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಾಗಿಟ್ಟುಕೊಂಡು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ಪ್ರತಿ ಜ್ಞಾನವಿಕಾಸ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಮಹಿಳೆಯರಿಗೆ ಆಯೋಜನೆ ಮಾಡಲಾಗುವುದು, ಮಹಿಳೆಯರು ಉತ್ತಮ ಜ್ಞಾನ ಪಡೆಯಲು ಪ್ರತಿ ತಿಂಗಳು ಮಾಸಿಕ ಸಭೆ ನಡೆಸಲಾಗುವುದು ಎಂದರು.

ಅರೋಗ್ಯ ಅಧಿಕಾರಿ ವಿಠಲ್ ಆರೋಗ್ಯದ ಬಗ್ಗೆ ಮಾಹಿತಿ ತಿಳಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಸವಿತಾ, ವಲಯದ ಸೇವಾಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಹಾಗೂ ಊರಿನ ಮುಖಂಡರು ಭಾಗವಸಿದ್ದರು.ಜಿಲ್ಲಾ ಕಸಾಪ ಸಹ ಕಾರ್ಯದರ್ಶಿಯಾಗಿ ಉಮಾಶಂಕರ್ ನೇಮಕ

ಮದ್ದೂರು:ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿಯಾಗಿ ವಿ.ಸಿ.ಉಮಾಶಂಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದ್ದಾರೆ.

ತಾಲೂಕು ಕಸಾಪ ಕ್ರಿಯಾಶೀಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಸಿ.ಉಮಾಶಂಕರ ಅವರನ್ನು ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಶ್ರಮಿಸಲು ಜಿಲ್ಲಾ ಕಸಾಪ ಸಹ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ವಿ.ಸಿ.ಉಮಾಶಂಕರ ಅವರನ್ನು ಜಿಲ್ಲಾ ಸಂಚಾಲಕರಾದ ಡಾ.ಮೀರ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾದ ಹುಸ್ಕೂರು ಕೃಷ್ಣೇಗೌಡ, ಹರ್ಷ ಪಣ್ಣೆ ದೊಡ್ಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎಂ.ಕ್ರಾಂತಿ ಸಿಂಹ, ಕೋಶಾಧ್ಯಕ್ಷ ಅಪ್ಪಾಜಪ್ಪ ಅಭಿನಂದಿಸಿದ್ದಾರೆ.