ಸಾರಾಂಶ
ಇತ್ತೀಚಿನ ದಿನಗಳಲ್ಲಿ ಸಲಿಂಗಕಾಮ ಲೈಂಗಿಕ ಕ್ರಿಯೆ ಹೆಚ್ಚು ಕಂಡುಬರುತ್ತಿರುವುದರಿಂದ ಅವಿವಾಹಿತ ಯುವಕರಲ್ಲಿ ಎಚ್ಐವಿ ಖಚಿತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ನೋವಿನ ಸಂಗತಿ ಎಂದು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಕಳವಳ ವ್ಯಕ್ತಪಡಿಸಿದರು. ಹೆಬ್ಬಾಲೆ ಗ್ರಾಮ ಪಂಚಾಯತ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಸಹಯೋಗದಲ್ಲಿ ಗಂಗನಾಳು ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.
ಅರಕಲಗೂಡು: ಇತ್ತೀಚಿನ ದಿನಗಳಲ್ಲಿ ಸಲಿಂಗಕಾಮ ಲೈಂಗಿಕ ಕ್ರಿಯೆ ಹೆಚ್ಚು ಕಂಡುಬರುತ್ತಿರುವುದರಿಂದ ಅವಿವಾಹಿತ ಯುವಕರಲ್ಲಿ ಎಚ್ಐವಿ ಖಚಿತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ನೋವಿನ ಸಂಗತಿ ಎಂದು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಸನ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ ಹಾಗೂ ಹೆಬ್ಬಾಲೆ ಗ್ರಾಮ ಪಂಚಾಯತ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಸಹಯೋಗದಲ್ಲಿ ಗಂಗನಾಳು ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.ಹೆಬ್ಬಾಲೆ ಗ್ರಾಮ ಪಂಚಾಯಿತಿಯಅಭಿವೃದ್ಧಿ ಅಧಿಕಾರಿ ಅರುಣಕುಮಾರ, ಸದಸ್ಯ ಪ್ರಶಾಂತ, ಕಾರ್ಯದರ್ಶಿ ಗೋಪಾಲ, ಬೋಳಖ್ಯಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಂರಕ್ಷಣಾಧಿಕಾರಿಯಾದ ಸರೋಜ, ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞರಾದ ಗೌರಮ್ಮ ಹಾಗೂ ಎನ್‌ಸಿಡಿ ವಿಭಾಗದ ಆಪ್ತಸಮಾಲೋಚಕರಾದ ಉಮೇಶ್, ಶುಶ್ರೂಷಕರಾದ ಲಲಿತಾ, ಹಾಸನದ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ತಾಲೂಕು ಮೇಲ್ವಿಚಾರಕ ಶೇಖರೇಗೌಡ, ಇತರರು ಶಿಬಿರದಲ್ಲಿ ಭಾಗವಹಿಸಿದ್ದರು.