ಸಾರಾಂಶ
ವಕೀಲ ದಿನಾಚರಣೆಯ ಪ್ರಯುಕ್ತ ವಕೀಲರ ಸಂಘದಲ್ಲಿ ರೋಟರಿ ಕ್ಲಬ್ ವಿಷನ್ ಮತ್ತು ಲಯನ್ಸ್ ಕ್ಲಬ್ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ವಕೀಲರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಒತ್ತಡವಿದ್ದರೂ ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ. ಮಹೇಶ್ ಅವರು ಏಡ್ಸ್ ಜಾಗೃತಿಯ ಬಗ್ಗೆ ಹಾಸನದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜಗದೀಶ್ ಅರಿವು ಮೂಡಿಸಿದರು.
ಚನ್ನರಾಯಪಟ್ಟಣ: ವಕೀಲ ದಿನಾಚರಣೆಯ ಪ್ರಯುಕ್ತ ವಕೀಲರ ಸಂಘದಲ್ಲಿ ರೋಟರಿ ಕ್ಲಬ್ ವಿಷನ್ ಮತ್ತು ಲಯನ್ಸ್ ಕ್ಲಬ್ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ಚಿಕಿತ್ಸೆ, ಮಧುಮೇಹ ಮತ್ತು ಬಿ.ಪಿ, ಹೃದಯ ಸಂಬಂಧಿ ತಪಾಸಣೆಯನ್ನು ಸುಮಾರು ೧೫೦ ಜನರಿಗೆ ಮಾಡಲಾಯಿತು ಹಾಗೂ ರಕ್ತದಾನ ಶಿಬಿರದಲ್ಲಿ ಸುಮಾರು ೪೫ ವಕೀಲರು ರಕ್ತದಾನ ಮಾಡುವ ಮೂಲಕ ವಿಶೇಷವಾಗಿ ವಕೀಲರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಾಸನದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜಗದೀಶ್ ಉದ್ಘಾಟಿಸಿ. ವಕೀಲರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಒತ್ತಡವಿದ್ದರೂ ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ. ಮಹೇಶ್ ಅವರು ಏಡ್ಸ್ ಜಾಗೃತಿಯ ಬಗ್ಗೆ ಅರಿವು ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಬಿ. ವಿ. ವಿಜಯ್, ಲಯನ್ಸ್ ಕ್ಲಬ್ ಅಧ್ಯಕ್ಷ ಗಿರೀಶ್ ಹಾಗೂ ವಕೀಲರು ಭಾಗವಹಿಸಿದ್ದರು.