ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ವತಿಯಿಂದ ಪರ್ಕಳ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯ ಆನಂದ್ ನಾಯ್ಕ ಅಧ್ಯಕ್ಷತೆಯಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ಉಡುಪಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ವತಿಯಿಂದ ಪರ್ಕಳ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯ ಆನಂದ್ ನಾಯ್ಕ ಅಧ್ಯಕ್ಷತೆಯಲ್ಲಿ ಜರುಗಿತು.ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣಾಚಲ ಹೆಗ್ದೆ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದೊಡ್ಡಣಗುಡ್ಡೆ ಎ.ವಿ. ಬಾಳಿಗೆ ಆಸ್ಪತ್ರೆಯ ಸಮುದಾಯ ಕಾರ್ಯನಿರ್ವಾಹಕರಾದ ಸುರೇಶ್ ಎಸ್. ನಾವೂರು ಅವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಪೀಳಿಗೆ ಜವಾಬ್ದಾರಿ ಮತ್ತು ದುಶ್ಚಟದ ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಪ್ರಾಸ್ತವಿಕವಾಗಿ ಮಾತನಾಡಿ, ಸ್ವಸ್ತ ಸಮಾಜ ನಿರ್ಮಾಣಕ್ಕೆ ಮಕ್ಕಳ ಪಾತ್ರ ಏನು ಎಂಬುದರ ಬಗ್ಗೆ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯನಂದ ನಾಯಕ್ ಅತ್ರಾಡಿ, ರೋಟರಿ ಅಧ್ಯಕ್ಷ ಅಬೂಬಕ್ಕರ್ ದೇವಿನಗರ, ಶಾಲಾ ಸಹಶಿಕ್ಷಕಿ ಸುಜಾತಾ, ಶುಭವತಿ ಮೊದಲಾದವರು ಉಪಸ್ಥಿತರಿದ್ದರು.ಯೋಜನೆಯ ಮಣಿಪಾಲ ವಲಯದ ಮೇಲ್ವಿಚಾರಕರಾದ ಬಾಲಚಂದ್ರ ಸ್ವಾಗತಿಸಿದರು. ಸುಜಾತಾ ವಂದಿಸಿದರು. ಶಶಿರೇಖಾ ಕಾರ್ಯಕ್ರಮ ನಿರ್ವಹಿಸಿದ್ದರು.