ಸಾರಾಂಶ
- ರಾಮನಹಳ್ಳಿ ಸಮುದಾಯ ಭವನದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಉದ್ಘಾಟನೆ
-- ಗರ್ಭಿಣಿಯರು, ಬಾಣಂತಿಯರು ಅಪೌಷ್ಠಿಕತೆ, ರಕ್ತಹೀನತೆ ಯಿಂದ ಬಳಲದಂತೆ ಸದಾ ನಿಗಾವಹಿಸಬೇಕು.
- ಪ್ರತೀ ವರ್ಷ ಸೆಪ್ಟೆಂಬರ್ ನಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ- ಮಕ್ಕಳು ಹದಿಹರೆಯದವರು, ಗರ್ಭಿಣಿಯರು, ತಾಯಂದಿರಲ್ಲಿ ಅಪೌಷ್ಠಿಕತೆ ತಡೆ, ಪೌಷ್ಠಿಕ ಆಹಾರದ ಮಹತ್ವ ಕುರಿತು ಜಾಗೃತಿ
- ಮಾತೃ ಪೂರ್ಣ, ಕ್ಷೀರಭಾಗ್ಯ ಯೋಜನೆ ಸರ್ಕಾರದಿಂದ ಜಾರಿಕನ್ನಡಪ್ರಭವಾರ್ತೆ, ಚಿಕ್ಕಮಗಳೂರುಗರ್ಭಿಣಿಯರು, ಬಾಣಂತಿಯರು ಪೌಷ್ಠಿಕ ಆಹಾರದ ಕೊರತೆಯಿಂದ ರಕ್ತಹೀನತೆ, ಅಪೌಷ್ಠಿಕತೆಯಿಂದ ಬಳಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಆರೋಗ್ಯ ಇಲಾಖೆ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆ ನೀಡಿದರು.ರಾಮನಹಳ್ಳಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಪೋಷಣ್ ಅಭಿಯಾನ ಯೋಜನೆಯಡಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗರ್ಭಿಣಿಯರು, ಬಾಣಂತಿಯರು ಅಪೌಷ್ಠಿಕತೆ, ರಕ್ತಹೀನತೆ ಯಿಂದ ಬಳಲದಂತೆ ಸದಾ ನಿಗಾವಹಿಸಬೇಕು. ಜೊತೆಗೆ ಇಲಾಖೆಯಿಂದ ಸಿಗುವ ಸೌಲಭ್ಯ ಸದುಪಯೋಗಪಡಿಸಿಕೊಂಡಾಗ ಎರಡು ಜೀವಗಳು ಅನಾರೋಗ್ಯಕ್ಕೆ ತುತ್ತಾಗುವುದನ್ನು ತಡೆಯಬಹುದು ಎಂದರು.
ಹದಿಹರಿಯದ ಹೆಣ್ಣು ಮಕ್ಕಳು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು, 0- 6 ವರ್ಷದ ಮಕ್ಕಳ ಪೌಷ್ಠಿಕಾಂಶದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿದರೆ ಕಡಿಮೆ ತೂಕದ ಶಿಶು ಜನನ ಕಡಿಮೆ ಮಾಡ ಬೇಕೆಂಬುದು ಈ ಅಭಿಯಾನದ ಉದ್ದೇಶ ಎಂದು ಹೇಳಿದರು.ಮಹಿಳೆಯರು ತರಕಾರಿ, ಸೊಪ್ಪು, ಹಣ್ಣುಗಳನ್ನು ಕೇವಲ ಪ್ರದರ್ಶನಕ್ಕೆ ಮಾತ್ರ ಮೀಸಲಿಡದೆ ಸೇವಿಸುವ ಮೂಲಕ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕೆಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ರಂಗನಾಥ್ ಮಾತನಾಡಿ, ಪೋಷಣ್ ಅಭಿಯಾನದ ಅಂಗವಾಗಿ ಪ್ರತೀ ವರ್ಷ ಸೆಪ್ಟೆಂಬರ್ ನಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ನಡೆಸಲಾಗುತ್ತದೆ. ಇದರಲ್ಲಿ ಮಕ್ಕಳು ಹದಿಹರೆಯದ ಯುವತಿಯರು, ಗರ್ಭಿಣಿಯರು ಹಾಲುಣಿಸುವ ತಾಯಂದಿರಲ್ಲಿ ಅಪೌಷ್ಠಿಕತೆ ತಡೆಗಟ್ಟುವ ಜೊತೆಗೆ ಪೌಷ್ಠಿಕಾಂಶವುಳ್ಳ ಆಹಾರದ ಮಹತ್ವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಪೌಷ್ಠಿಕಾಂಶದ ಮಟ್ಟ ವೃದ್ಧಿಪಡಿಸಲು ಮಾತೃ ಪೂರ್ಣ ಹಾಗೂ ಕ್ಷೀರಭಾಗ್ಯ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಖನಿಜಾಂಶ ಹೊಂದಿದ ಸೊಪ್ಪು, ತರಕಾರಿ ಜೊತೆಗೆ ಮೊಳಕೆ ಕಾಳುಗಳನ್ನು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು, ತಾಯಿ ಆರೋಗ್ಯವಾಗಿದ್ದರೆ ಆರೋಗ್ಯವಂತ ಮಗು ಜನಿಸಲು ಸಾಧ್ಯ ಎಂದು ತಿಳಿಸಿದರು.ವೇದಿಕೆಯಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಕುಮಾರಿ, ನಗರಸಭೆ ಸದಸ್ಯ ಲಕ್ಷ್ಮಣ್, ಸಂಪನ್ಮೂಲ ವ್ಯಕ್ತಿಗಳಾಗಿ ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ಅಂಗನವಾಡಿ ಕಾರ್ಯಕರ್ತೆಯರಾದ ಪುಷ್ಪ, ಶೋಭಾ, ಲಕ್ಷ್ಮಿ, ಆಶಾ, ಭಾಗ್ಯ, ಸುಮ, ವೀಣಾ, ವೇದ, ಲತಾ, ಚಂದ್ರಕಲಾ, ಪ್ರೇಮ, ಪ್ರಮೀಳ, ಜಯಮ್ಮ, ಸತ್ಯ, ಶಾಜಿಯಾ ಉಪಸ್ಥಿತರಿದ್ದರು.ಭಾಗ್ಯಲಕ್ಷ್ಮಿ ಪ್ರಾರ್ಥಿಸಿ, ಮೇಲ್ವಿಚಾರಕಿ ಪುಷ್ಪ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ಅನುಸೂಯ ಸ್ವಾಗತಿಸಿ, ಕೋಮಲಾಕ್ಷಿ ವಂದಿಸಿದರು.ಪೋಟೋ ಫೈಲ್ ನೇಮ್ 6 ಕೆಸಿಕೆಎಂ 5ಚಿಕ್ಕಮಗಳೂರಿನ ರಾಮನಹಳ್ಳಿ ಸಮುದಾಯದಲ್ಲಿ ಸೋಮವಾರ ಏರ್ಪಡಿಸಿದ್ದ ಪೋಷಣ್ ಅಭಿಯಾನ ಯೋಜನೆಯಡಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ವಿ. ಹನುಮಂತಪ್ಪ ಉದ್ಘಾಟಿಸಿದರು. ಶಿಶು ಅಭಿವೃದ್ಧಿ ಅಧಿಕಾರಿ ಸಿ. ರಂಗನಾಥ್ ಇದ್ದರು.