ಸಾರಾಂಶ
ಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಬೀಡಿ, ಸಿಗರೇಟ್ ವ್ಯಸನದಿಂದ ಮುಕ್ತರಾಗಲು ಸೂಕ್ತ ಆರೋಗ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಗ್ರಾಪಂ ಅಧ್ಯಕ್ಷ ಚೆಲುವರಾಜು ಹೇಳಿದರು.ತಾಲೂಕಿನ ಹೊಸಹಳ್ಳಿ ಗ್ರಾಪಂ ಸಭಾಂಗಣದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪಾಲಹಳ್ಳಿ ಆಯುಷ್ಮಾನ್ ಆರೋಗ್ಯ ಮಂದಿರದಿಂದ ಆಯೋಜಿಸಿದ್ದ ವಿಶ್ವ ಶ್ವಾಸಕೋಶದ ದಿನವನ್ನು ಉದ್ಘಾಟಿಸಿ ಮಾತನಾಡಿ, ಶ್ವಾಸಕೋಶ ಆರೋಗ್ಯಕರವಾಗಿರಲು ಧೂಮಪಾನ ತ್ಯಜಿಸಿ, ನಿಯಮಿತವಾಗಿ ವ್ಯಾಯಾಮ ಮಾಡಿ ಯೋಗಾಭ್ಯಾಸ ಮಾಡುವಂತೆ ಸಲಹೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಎಂದರು.ಶ್ವಾಸಕೋಶದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಉತ್ತಮ ಆರೈಕೆಯನ್ನು ಉತ್ತೇಜಿಸಲು ಪ್ರತಿ ವರ್ಷ ಸೆ.25 ರಂದು ವಿಶ್ವ ಶ್ವಾಸಕೋಶ ದಿನ ಆಚರಿಸಲಾಗುತ್ತಿದೆ ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿದರು. ಈ ವೇಳೆ ಪಿಡಿಒ ಶಶಿಕಲಾ, ಆಡಳಿತ ವೈದ್ಯಾಧಿಕಾರಿ ಡಾ.ಗಿರೀಶ, ಜಿ.ಬಿ ಹೇಮಣ್ಣ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಣ್ಯವತಿ, ಸಮುದಾಯ ಆರೋಗ್ಯಾಧಿಕಾರಿ ಎಸ್.ನಂದಿನಿ, ಗ್ರಾಪಂ ಸಿಬ್ಬಂದಿ ಭೂವನ, ರಾಚಯ್ಯ, ಐವೈಡಿ ಲಿಂಕ್ ಕಾರ್ಯಕರ್ತೆ ನಾಗಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.