ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದರೊಂದಿಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ

ಕಂಪ್ಲಿ: ನಿತ್ಯ ಕ್ರೀಡಾಭ್ಯಾಸದಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಹೇಳಿದರು.

ಇಲ್ಲಿನ ಷಾ.ಮಿಯಾಚಂದ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜವುಕು ಸರ್ಕಾರಿ ಪ್ರೌಢಶಾಲೆಯಿಂದ ಗುರುವಾರ ಆಯೋಜಿಸಿದ್ದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದರೊಂದಿಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕು ದೈಹಿಕ ಪರಿವೀಕ್ಷಕಿ ಎಂ.ಆರ್. ಪದ್ಮಾರೆಡ್ಡಿ, ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್‌ರೆಹಮಾನ್, ಜವುಕು ಸರ್ಕಾರಿ ಪ್ರೌಢಶಾಲೆ ಅಧ್ಯಕ್ಷ ಫಕ್ಕೀರಪ್ಪ, ಕ್ರೀಡಾ ಸಂಚಾಲಕ ಹೊಸಕೋಟೆ ಚಂದ್ರಶೇಖರ, ಹೊನ್ನಳ್ಳಿ ಗಂಗಾಧರ, ಎನ್.ಗಿರೀಶ್, ಕೊಟ್ರೇಶಪ್ಪ, ರಮೇಶ್ ಎನ್. ಶಿವಪೂರ, ಎಚ್.ದೊಡ್ಡಬಸಪ್ಪ, ಹನುಮಂತಪ್ಪ, ಎಂ.ಎ. ನಾಗನೌಡ, ಟಿ.ಎಂ. ಬಸವರಾಜ, ಸುಜಾತಾ, ಬೀರಲಿಂಗಪ್ಪ, ಹಿರೇಮಠ ವಿರುಪಾಕ್ಷಯ್ಯ, ನಿಂಗರಾಜ ಕುಷ್ಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.