ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಮಾಹಿತಿ ಶಿಬಿರ

| Published : Nov 05 2025, 01:03 AM IST

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಮಾಹಿತಿ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ಮೂಲ್ಕಿ ತಾಲೂಕು ಮತ್ತು ಮಂಗಳೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರಿಗಾಗಿ ಮೂಲ್ಕಿ ಬಿಲ್ಲವ ಸಂಘದ ರುಕ್ಕರಾಮ ಸಾಲ್ಯಾನ್ ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಆರೋಗ್ಯ ಮಾಹಿತಿ ಶಿಬಿರ ಸಂಪನ್ನಗೊಂಡಿತು.

ಮೂಲ್ಕಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದಲ್ಲಿ ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರಿಗೆ ಸ್ಪಂದಿಸುವ ಕಾರ್ಯ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಶ್ರಮವಹಿಸಿ ಮೂಡಬಿದಿರೆ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರುವ ಹಾಗೆ ಮಾಡಬೇಕೆಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಕರೆ ನೀಡಿದರು.

ಮೂಲ್ಕಿ ಹಾಗೂ ಮಂಗಳೂರು ತಾಲೂಕು ವ್ಯಾಪ್ತಿಯ ಮಿಥುನ್ ಎಂ. ರೈ ಅಭಿಮಾನಿ ಬಳಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೂಡಬಿದಿರೆ ಕ್ಷೇತ್ರಕ್ಕೆ ಒಳಪಟ್ಟ ಮೂಲ್ಕಿ ತಾಲೂಕು ಮತ್ತು ಮಂಗಳೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರಿಗಾಗಿ ಮೂಲ್ಕಿ ಬಿಲ್ಲವ ಸಂಘದ ರುಕ್ಕರಾಮ ಸಾಲ್ಯಾನ್ ಸಭಾಗೃಹದಲ್ಲಿ ಆಯೋಜಿಸಲಾದ ವಿವಿಧ ಸಾಂಸ್ಕೃತಿಕ ಮತ್ತು ಆರೋಗ್ಯ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.ಕಟೀಲು ಕ್ಷೇತ್ರದ ಅರ್ಚಕ ಶ್ರೀಕರ ಆಸ್ರಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಮಾತನಾಡಿ, ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಕುಟುಂಬ ಬೆಳಗಿಸುವ ನಿಸ್ವಾರ್ಥ ಸೇವೆ ಮಾಡುತ್ತಿದ್ದು, ಅವರ ಶ್ರಮ ಶ್ಲಾಘನೀಯ ಎಂದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜೈಕೃಷ್ಣ ಕೋಟ್ಯಾನ್ ಹಳೆಯಂಗಡಿ, ಸುಧಾಕರ ಸಾಲ್ಯಾನ್ ಐಕಳ, ಎಕ್ಕಾರು ಡಾ.ಪದ್ಮನಾಭ ಭಟ್ ಕಟೀಲು, ಶ್ರೀದೇವಿ ಮಹಿಳಾ ಮಂಡಳಿ ತೋಕೂರು, ಬಜ್ಪೆ ಬಿಲ್ಲವ ಸಮಾಜ ಸೇವಾ ಸಂಘ, ಜೋಕಟ್ಟೆ ಆಜಾದ್ ಯೂತ್ ಕ್ಲಬ್ ಅನ್ನು ಗೌರವಿಸಲಾಯಿತು.ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಪ್ರಸಾದ್ ಕೊರಿಯಾರ್, ಹಿರಿಯ ಕಾಂಗ್ರೆಸ್ ನಾಯಕ ಶಿವರಾಮ ಮಲ್ಲಿ, ಹಸನಬ್ಬ ಬಾಳ, ಕಾಂಗ್ರೆಸ್ ನಾಯಕ ಪ್ರಮೋದ್ ಕುಮಾರ್ ಕಿನ್ನಿಗೋಳಿ, ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಕೋಸ್ಟಾ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಚಂದ್ರಹಾಸ ಸನಿಲ್ ಮೂಡಬಿದಿರೆ ಮತ್ತಿತರರಿದ್ದರು.ಆಳ್ವಾಸ್ ಕಾಲೇಜಿನ ವೈದ್ಯೆ ಡಾ.ಪ್ರಗತಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸ್ವಾಗತಿಸಿದರು. ಪ್ರಕಾಶ್ ಕಿನ್ನಿಗೋಳಿ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಜಾನಪದ ನೃತ್ಯ, ಭಾವಗೀತೆ ಸ್ಪರ್ಧೆ ನಡೆಯಿತು.