ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ತಾಪುರ
ಶೈಕ್ಷಣಿಕ ಕಾಲಾವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ಆರೋಗ್ಯದ ಕಡೆಗೂ ಗಮನ ಹರಿಸುವುದು ಬಹಳ ಅವಶ್ಯಕವಾಗಿದೆ ಎಂದು ಎನ್‌ಇಕೆಆರ್‌ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.ಪಟ್ಟಣದ ನಾಗಾವಿ ಕ್ಯಾಂಪಸ್‌ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸತ್ಯಸಾಯಿ ಅನ್ನಪೂರ್ಣ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಮಧ್ಯಾಹ್ನ ಉಪಹಾರ) ಮತ್ತು ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ೧ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿ ಹಾಲಿನೊಂದಿಗೆ ಬೇರಸಿ ಪೂರಕ ಪೌಷ್ಟಿಕ ಆಹಾರ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿನ ಅಪೌಷ್ಟಿಕತೆ ನಿವಾರಿಸಲು ಸರಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಹೀಗಾಗಿ ವಿದ್ಯಾರ್ಥಿಗಳು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಹಾಗೂ ಸದೃಡ ಆರೋಗ್ಯ ಹೊಂದಬೇಕು ಎಂದು ಕಿವಿಮಾತು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ ಮಾತನಾಡಿ, ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಿಸಲು ಅನಿಮಿಯವನ್ನು ತಡೆಗಟ್ಟಲು ಉತ್ತಮ ಆರೋಗ್ಯಕರ ಬೆಳವಣಿಗೆಯೊಂದಿಗೆ ಶಾಲೆಯ ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಸಿರಿಧಾನ್ಯಗಳ ಆಹಾರದ ಬಳಕೆಯ ಉಪಯುಕ್ತತೆ ಮತ್ತು ಸಿರಿಧಾನ್ಯಗಳಲ್ಲಿ ದೊರೆಯುವ ಬಹುಪೌಷ್ಟಿಕಾಂಶಗಳ ಕುರಿತು ಅರಿವು ಜಾಗೃತಿಯನ್ನು ಶಾಲಾ ಮಕ್ಕಳಲ್ಲಿ ಮೂಡಿಸಲು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕ್ಷೀರ ಭಾಗ್ಯ ಯೋಜನೆಯಡಿ ಬಿಸಿಹಾಲು ತಯಾರಿಸಿ ವಿತರಿಸುವ ಸಂದರ್ಭದಲ್ಲಿ ಬಿಸಿಹಾಲಿನೊಂದಿಗೆ ಬೆರಸಿ ಶಾಲಾ ಮಕ್ಕಳು ಕುಡಿಯಲು ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಸಂಸ್ಥೆಯವರು ಬಹು ಪೌಷ್ಟಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಮಿಶ್ರಣವನ್ನು ಉಚಿತವಾಗಿ ನೀಡಲು ಮುಂದೆ ಬಂದಿರುತ್ತಾರೆ ಎಂದು ಮಾಹಿತಿ ನೀಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕರ ಪ್ರಕಾಶ ನಾಯ್ಕೋಡಿ, ಎಸ್‌ಡಿಎಂಸಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಮಾತನಾಡಿದರು. ಬಿಆರ್‌ಸಿ ಮಲ್ಲಿಕಾರ್ಜುನ ಸೇಡಂ. ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜು ಕಾಳಗಿ, ಸಿಆರ್‌ಸಿ ತಮ್ಮನ್ನಾ ಕೌಸರ್, ಅಬ್ದುಲ್ ಸಲಿಂ, ಹರಿಶ್ಚಂದ್ರ ಕರಣಿಕ್, ಅರುಣಕುಮಾರ ಸುಲೇಗಾಂವ್, ಶಿವಬಸಪ್ಪ ಗುತ್ತೆಪ್ಪನವರ್, ಶಿವಪುತ್ರಪ್ಪ, ಶಿವರಾಜ್ ಹೆಬ್ಬಾಳ, ಸಂತೋಷಕುಮಾರ ಜಮಾದಾರ, ಹಣಮಂತ, ಜನತುಲ್ಲಾ ಫಿರದೋಸ್, ಪುಷ್ಪಾವತಿ, ಪಲ್ಲವಿ, ರೇಣುಕಾ ರೋಣದ್, ತಾಯಿಬಾ, ಮಾಲಾಶ್ರೀ ಇತರರು ಇದ್ದರು. ಸಂಗಮೇಶ ರೋಣದ್ ಸ್ವಾಗತಿಸಿದರು, ಶಿವಪುತ್ರಪ್ಪ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))