ಸಾರಾಂಶ
ಕುಟುಂಬ ಆರೋಗ್ಯವಾಗಿ ಇರಬೇಕಾದರೆ ಮನೆಯಲ್ಲಿ ಪೌಷ್ಟಿಕ ಆಹಾರ ತಯಾರಿಸಿ ಬಳಕೆ ಮಾಡಬೇಕು
ಗದಗ: ಕುಟುಂಬದ ಆರೋಗ್ಯ ವೃದ್ಧಿ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮನುಷ್ಯನ ಆರೋಗ್ಯ ಅತೀ ಮುಖ್ಯ. ಆರೋಗ್ಯ ಉತ್ತಮವಿರಬೇಕಾದರೆ ಪೌಷ್ಟಿಕ ಆಹಾರ ಸೇವನೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ವಿದ್ಯಾಭ್ಯಾಸ ಹಾಗೂ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಹೇಳಿದರು.
ನಗರದ ಬಸವೇಶ್ವರ ನಗರದ ಪ್ರಾಥಮಿಕ ಶಾಲೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ನಡೆದ ಸಿರಿಧಾನ್ಯಗಳ ಬಳಕೆಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದಿನ ಜೀವನ ಪದ್ಧತಿಯಲ್ಲಿ ಸರಿಯಾಗಿ ಆಹಾರ ಪದ್ಧತಿ ಅನುಷ್ಠಾನ ಮಾಡದೆ ಇದ್ದರೆ ಮುಂದೆ ಕುಟುಂಬದ ಆರೋಗ್ಯ ಕಾಪಾಡಲು ಸಾಧ್ಯವಿಲ್ಲ ಎಂದರು.
ಡಾ.ದೀಪಾ ಮಾತನಾಡಿ, ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಯಲ್ಲಿ ಸರಿಯಾದ ಆಹಾರ ಪದ್ಧತಿ ಅಳವಡಿಸಿ, ಪೌಷ್ಟಿಕ ಆಹಾರದ ಬಗ್ಗೆ ತಿಳಿಯಬೇಕಾದ ಅನಿವಾರ್ಯತೆ ಇದೆ. ಕುಟುಂಬ ಆರೋಗ್ಯವಾಗಿ ಇರಬೇಕಾದರೆ ಮನೆಯಲ್ಲಿ ಪೌಷ್ಟಿಕ ಆಹಾರ ತಯಾರಿಸಿ ಬಳಕೆ ಮಾಡಬೇಕು ಎಂದರು.ಈ ವೇಳೆ ನಿವೃತ್ತ ಶಿಕ್ಷಕಿ ಶಾರದಾ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಗಂಗಮ್ಮ ಪ್ರಾಸ್ತಾವಿಕವಾಗಿ ಮಾತಾಡಿದರು. ಶ್ರೀದೇವಿ ಗೊಂಡಬಾಳ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ಸುಜಾತ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು. ವಿಜಯಲಕ್ಷ್ಮೀ ಸ್ವಾಗತಿಸಿದರು. ಗೀತಾ ವಂದಿಸಿದರು.