ಸಾರಾಂಶ
ದುಶ್ಚಟದ ಪರಿಣಾಮದ ಕುರಿತು ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಸಮೀಪದ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡ್ಲಿಪೇಟೆ ವಲಯ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ದುಶ್ಚಟದ ಪರಿಣಾಮದ ಕುರಿತು ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮತ್ತು ದಿನದ ಮಹತ್ವ ಕುರಿತು ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕೊಡಗು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಡಾ.ಜಮೀರ್ ಆಹಮ್ಮದ್ ಮಾತನಾಡಿ, ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀಳುವುದಲ್ಲದೆ ತನ್ನ ಜೀವನದ ಮತ್ತು ಸಮಾಜದ ಸ್ವಾಸ್ಥ್ಯ ಕೆಡುತ್ತದೆ. ದುಶ್ಚಟದ ಗೀಳು ಅಂಟಿಸಿಕೊಂಡವರೆಗೆ ತನ್ನ ಮನೆಯಲ್ಲಿ ಮತ್ತು ಸಮಾಜದಲ್ಲಿ ಗೌರವಸಿಗುವುದಿಲ್ಲ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರ ಇರಬೇಕು ಎಂದು ಹೇಳಿದರು. ಇಂದು ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲಿ ದುಶ್ಚಟಗಳ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರಿಂದ ದುಶ್ಚಟಗಳನ್ನು ಹೋಗಲಾಡಿಸಬಹುದು. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ದುಶ್ಚಟಗಳನ್ನು ಹೋಗಲಾಡಿಸುವ ಸಲುವಾಗಿ ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನಿಯಕರವಾಗಿದೆ ಎಂದರು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೆ. ಪಿ. ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಯೋಗೇಂದ್ರ, ಪ.ಪೂ.ಕಾಲೇಜು ಪ್ರಾಂಶುಪಾಲ ಪವಾರ್, ಪೊಲೀಸ್ ಸಿಬ್ಬಂದಿ ಡಿ.ವೈ.ಡಿಂಪಲ್ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.