ಸಾರಾಂಶ
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳಿಗೆ ಮೊಬೈಲ್ ವ್ಯಾನ್‌ಗಳ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಆರೋಗ್ಯ ತಪಾಸಣೆ ಮತ್ತು ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಶೀಘ್ರ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಮಳವಳ್ಳಿ ತಾಲೂಕಿನ ಹಲಗೂರಿಗೆ ತೆರಳುತ್ತಿದ್ದ ವೇಳೆ ವಿಶ್ವೇಶ್ವರಯ್ಯ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಆರೋಗ್ಯ ರಕ್ಷಣೆ ಇಂದು ಪ್ರತಿಯೊಬ್ಬರಿಗೂ ಅಗತ್ಯ. ಇದರಿಂದ ಗ್ರಾಮೀಣ ಜನತೆಗೆ ಗ್ರಾಮದಲ್ಲೇ ಎಲ್ಲ ರೀತಿಯ ಆರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಔಷಧ ಕಲ್ಪಿಸುವುದು ನನ್ನ ಗುರಿಯಾಗಿದೆ. ಅದಕ್ಕಾಗಿ ನಮ್ಮ ಇಲಾಖೆಯಿಂದ ನೆರವು ನೀಡಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದರು.
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು ಎಂದರು.ಭತ್ತ ಖರೀದಿಗೆ ಕ್ರಮ:
ಭತ್ತ ಖರೀದಿ ಕೇಂದ್ರ ಆರಂಭಿಸುವ ಬಗ್ಗೆ ಮಾತನಾಡಿದ್ದೇನೆ. 15ನೇ ತಾರೀಕಿನಿಂದ ಭತ್ತ ಖರೀದಿಸುವುದಾಗಿ ಹೇಳಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ. ರೈತರು ಪ್ರಸ್ತುತ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ ಎಂದರು.ಇದೇ ಸಂದರ್ಭರದಲ್ಲಿ ರೈತರು, ಬೇಸಿಗೆಗೆ ಎರಡು ಕಟ್ಟು ನೀರು ಕೊಡಲು ವ್ಯವಸ್ಥೆ ಮಾಡುವಂತೆ ಕೋರಿದಾಗ ಈ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಹಾಗಲಹಳ್ಳಿ ಚಿಕ್ಕತಿಮ್ಮೇಗೌಡ, ಮುಖಂಡರಾದ ಅಣ್ಣೂರು ನವೀನ್ ಕುಮಾರ್, ಕೆ.ಟಿ.ಸುರೇಶ್, ಗುರುದೇವರಹಳ್ಳಿ ಅರವಿಂದ್, ಅಣ್ಣೂರು ವಿನು ಹೊಂಡಾ ಸಿದ್ದೇಗೌಡ, ಎ.ಟಿ.ಶಂಕರ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))