ಸಾರಾಂಶ
ಅಪಘಾತದಲ್ಲಿ ಪುತ್ರ ಸಾವನ್ನಪ್ಪಿರುವ ಸುದ್ದಿ ಕೇಳಿ ತಾಯಿಯು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮಳವಳ್ಳಿ: ಅಪಘಾತದಲ್ಲಿ ಪುತ್ರ ಸಾವನ್ನಪ್ಪಿರುವ ಸುದ್ದಿ ಕೇಳಿ ತಾಯಿಯು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಲೇ.ಶಿವರಾಮು ಅವರ ಪುತ್ರ ಕೃಷ್ಣಮೂರ್ತಿ(20) ಶುಕ್ರವಾರ ಮಧ್ಯಾಹ್ನ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಪಂಡಿತಹಳ್ಳಿ ಬಳಿ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು.
ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶನಿವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಮೂರ್ತಿ ಮೃತಪಟ್ಟಿದ್ದಾರೆ.
ಮಗನ ಸಾವಿನ ಸುದ್ದಿ ಕೇಳಿದ ಕೃಷ್ಣಮೂರ್ತಿ ಅವರ ತಾಯಿ ಮಹದೇವಮ್ಮ (48) ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ತಾಯಿ- ಮಗನನ್ನು ಶನಿವಾರ ಸಂಜೆ ಅಕ್ಕಪಕ್ಕದಲ್ಲೇ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸಿದ್ದಾರೆ.