ಹೃದಯಾಘಾತ: ಬಿಜೆಪಿ ಯುವ ಮೋರ್ಚಾ ಮುಖಂಡ ಸಾವು

| Published : Jul 02 2025, 12:20 AM IST

ಸಾರಾಂಶ

ಮಗಳನ್ನು ಶಾಲೆಗೆ ಬಿಟ್ಟು ವಾಪಸ್ಸು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ತಲೆಸುತ್ತು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡರಾಗಿದ್ದ ಹೆಬ್ಬಾಕ ಸ್ವಾಮಿ (36) ಹಠಾತ್ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ.ಮಗಳನ್ನು ಶಾಲೆಗೆ ಬಿಟ್ಟು ವಾಪಸ್ಸು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ತಲೆಸುತ್ತು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಹೆಬ್ಬಾಕದ ಮೃತರ ತೋಟದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ.ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್. ಗ್ರಾಮಾಂತರ ಯುವ ಮುಖಂಡರಾದ ಅರಕೆರೆ ರವೀಶ್ ಸೇರಿದಂತೆ ಹಲವರು ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.