ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ.ಮಾದೇಗೌಡ (೪೪) ಮೃತ ಯೋಧ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ.ಮಾದೇಗೌಡ (೪೪) ಮೃತ ಯೋಧ. ೨೦೦೦ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಆಯ್ಕೆಯಾಗಿದ್ದರು. ಕಳೆದ ೨೫ ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ ಎಸ್.ಶಿಲ್ಪಾ, ಪುತ್ರ ಮತ್ತು ಪುತ್ರಿ ಇದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ ೧೦ ಗಂಟೆಯ ವೇಳೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನಕ್ಕೆ ತರಲಾಯಿತು. ಯೋಧನ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಿದರು.

ಪಾರ್ಥಿವ ಶರೀರಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಆರಕ್ಷಕ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ, ಶಾಸಕ ಪಿ.ರವಿಕುಮಾರ್ ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರು. ಜಿಲ್ಲಾಡಳಿತದಿಂದ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ ಬಳಿಕ ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು. ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ನಡೆಯಲಿರುವ ಅಂತ್ಯಕ್ರಿಯೆ ನಡೆಯಿತು. ಮೃತ ಯೋಧ ಮಾದೇಗೌಡ ಅವರನ್ನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಿಟ್ಟರು. ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇತರರು ಕುಟುಂಬದವರಿಗೆ ಸಾಂತ್ವನ ಹೇಳಿದರು.ಜ.20ರ ಸಾರ್ವಜನಿಕರ ಅಹವಾಲು ಸಭೆ

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ದೇವರಮಲ್ಲನಾಯಕನಹಳ್ಳಿಯ ಸರ್ವೇ ನಂ.54ರ ಸರ್ಕಾರಿ ಗೋಮಾಳ ಜಮೀನಿನ ಪೈಕಿ 9 ಎಕರೆ 35 ಗುಂಟೆ ಜಮೀನನ್ನು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಉದ್ದೇಶಕ್ಕಾಗಿ ಸಮಾಜ ಕಲ್ಯಾಣ ಇಲಾಖೆಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71 ರಂತೆ ಜಿಲ್ಲಾಧಿಕಾರಿಗಳು ಕಾಯ್ದಿರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸದರಿ ಜಮೀನಿನಲ್ಲಿ ವಸತಿ ಶಾಲೆ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಮೀನನ್ನು ಹಸ್ತಾಂತರಿಸಬೇಕಿರುವುದರಿಂದ ಸದರಿ ಜಾಗದಲ್ಲಿ ಅರಣ್ಯ ಇಲಾಖೆಯಿಂದ ಬೆಳೆಸಿರುವ ಮರಗಳನ್ನು ತೆರವುಗೊಳಿಸುವಂತೆ ತಹಸೀಲ್ದಾರ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಅರಣ್ಯ ಇಲಾಖೆಯಿಂದ ಮಹಜರ್ ಕ್ರಮ ಜರುಗಿಸಿದ್ದು, ನೀಲಗಿರಿ ಜಾತಿಯ 207 ಮರಗಳು ಹಾಗೂ ಅಕೇಶಿಯಾ ಜಾತಿಯ 35 ಮರಗಳು ಸೇರಿದಂತೆ ಒಟ್ಟು 242 ಮರಗಳ ಅಳತೆ ಪಟ್ಟಿ ತಯಾರಿಸಲಾಗಿದೆ.

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣ 8(3)(7)ರಡಿ 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕ ಸಹವಾಲುಗಳನ್ನು ಸ್ವೀಕರಿಸಿ ಅಗತ್ಯ ಕ್ರಮವಹಿಸಬೇಕಿದೆ. ಆದ್ದರಿಂದ ಜ.20ರ ಬೆಳಗ್ಗೆ 11 ಗಂಟೆಗೆ ದೇವರಮಲ್ಲನಾಯ್ಕನಹಳ್ಳಿ ಗ್ರಾಪಂನ ಸಮುದಾಯ ಭವನದಲ್ಲಿ ಮಂಡ್ಯ ಪ್ರಾದೇಶಿಕ ವಿಭಾಗದ ವೃಕ್ಷಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಸಮ್ಮುಖದಲ್ಲಿ ಸಾರ್ವಜನಿಕರ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ. ಸದರಿ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹವಾಲು ಸಲ್ಲಿಸುವಂತೆ ತಾಲೂಕು ವಲಯ ಅರಣ್ಯಾಧಿಕಾರಿ ಸಂಪತ್ ಪಟೇಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.