ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೌನಾಚರಣೆ ನಡೆಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.

- ಜಿಲ್ಲಾ ಕಾಂಗ್ರೆಸ್‌ನಿಂದ ಭಾವಪೂರ್ಣ ಶ್ರದ್ಧಾಂಜಲಿ । ರಾಜಕೀಯ ಗಣ್ಯರು, ಅಭಿಮಾನಿಗಳಿಂದ ಸಂತಾಪ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೌನಾಚರಣೆ ನಡೆಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.

ಪಾಲಿಕೆಯ ಮೇಯರ್‌ ಕೆ.ಚಮಾನ್ ಸಾಬ್ ಮಾತನಾಡಿ, ಭಾರತದ 14ನೇ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೇಶದಲ್ಲಿ ಒಂದು ದಶಕ ಕಾಲ ಅಸಾಧಾರಣ ಬೆಳವಣಿಗೆ ಮತ್ತು ಅಭಿವೃದ್ಧಿಯ ಅಧ್ಯಕ್ಷತೆ ವಹಿಸಿದ್ದರು. ಅವರ ಉಸ್ತುವಾರಿಯಲ್ಲಿ, ಭಾರತವು ತನ್ನ ಇತಿಹಾಸದಲ್ಲಿ ಅತ್ಯಧಿಕ ಬೆಳವಣಿಗೆ ದರವನ್ನು ಕಂಡಿತು. ಸರಾಸರಿ 7.7% ರಷ್ಟು ಸುಮಾರು 2 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಮಾರ್ಪಟ್ಟಿತು ಎಂದು ಸ್ಮರಿಸಿದರು.

ಉಪ ಮೇಯರ್‌ ಸೋಗಿ ಶಾಂತಕುಮಾರ್ ಮಾತನಾಡಿ, ಡಾ.ಮನಮೋಹನ್ ಸಿಂಗ್ ಭಾರತವನ್ನು ಆರ್ಥಿಕ ಶಕ್ತಿ ಕೇಂದ್ರವಾಗಲು ಕಾರಣವಾಗಿದ್ದಾರೆ. ಅವರ ದೂರದೃಷ್ಟಿತ್ವ, ಕಠಿಣ ಪರಿಶ್ರಮ ಮತ್ತು ವಿನಮ್ರತೆ ಹೆಸರಾಗಿದ್ದರು. ಅವರ ನಿಧನದಿಂದ ಕಾಂಗ್ರೆಸ್ ಸಮಿತಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಜಗದೀಶ್, ಮಹಾನಗರ ಪಾಲಿಕೆ ಸದಸ್ಯರಾದ ಎ. ನಾಗರಾಜ, ಗಡಿಗುಡಾಳ್ ಮಂಜುನಾಥ್. ಎಸ್.ಮಲ್ಲಿಕಾರ್ಜುನ್, ಜಾಕಿರ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಧಾ ಇಟ್ಟಿಗುಡಿ, ಆಶಾ ಉಮೇಶ್, ಮೀನಾಕ್ಷಿ ಜಗದೀಶ್, ಕೊಡಪಾನ್ ದಾದಾಪೀರ್, ನಾಮಿನಿ ಸದಸ್ಯರಾದ ರುದ್ರೇಶ್, ಡೋಲಿ ಚಂದ್ರು, ರಾಕೇಶ್, ಜಗದೀಶ್, ಕೇರಂ ಗಣೇಶ್, ಮನು ಇತರರು ಇದ್ದರು.

- - - -27ಕೆಡಿವಿಜಿ43: ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.