ವಿಜಯಪುರ : ನಗರದ 35ನೇ ವಾರ್ಡ್‌ನ ಕೌಜಲಗಿ ತಾಂಡಾದಲ್ಲಿ ಶನಿವಾರ ಸಂಜೆ ಎಸ್‌ಐಆರ್ ಪ್ರಕ್ರಿಯೆ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯತ್ನಾಳ ಬೆಂಬಲಿಗರ ಮಧ್ಯೆ ವಾಗ್ವಾದ ನಡೆದಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ 35ನೇ ವಾರ್ಡ್‌ನ ಕೌಜಲಗಿ ತಾಂಡಾದಲ್ಲಿ ಶನಿವಾರ ಸಂಜೆ ಎಸ್‌ಐಆರ್ ಪ್ರಕ್ರಿಯೆ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯತ್ನಾಳ ಬೆಂಬಲಿಗರ ಮಧ್ಯೆ ವಾಗ್ವಾದ ನಡೆದಿದೆ.ಸರ್ಕಾರಿ ಅಧಿಕಾರಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಧಮ್ಕಿ ಹಾಕುತ್ತಿದ್ದಾರೆ ಎಂದು ಶಾಸಕರ ಬೆಂಬಲಿಗರು ಆರೋಪಿಸಿದರು. ಶಾಸಕರ ಬೆಂಬಲಿಗರು ವಿನಾಕಾರಣ ಬಿಎಲ್‌ಒಗಳ ಬೆನ್ನು ಬಿದ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಹಾಗೂ ಯತ್ನಾಳ ಆಪ್ತ ಸಹಾಯಕರ ನಡುವೆ ವಾಗ್ವಾದ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳು ಪರಿಸ್ಥಿತಿ ತಿಳಿಗೊಳಿಸಿದರು.