ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನಲ್ಲಿ ಮಂಗಳವಾರ ರಾತ್ರಿಯಿಂದ ಮಳೆಯು ಬಿರುಸುಗೊಂಡಿದ್ದು, ಕೆಲವೆಡೆ ಬರೆ ಕುಸಿತ ಹಾಗೂ ಕಟ್ಟಡಕ್ಕೆ ಹಾನಿಯಾಗಿದೆ.

ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಉಪಕಟ್ಟಡದ ಛಾವಣಿ ಕುಸಿದು ಹಾನಿಯಾಗಿದ್ದು, ಕಟ್ಟಡದಲ್ಲಿರುವ ಗ್ರಾಮ ಒನ್ ಕೇಂದ್ರವನ್ನು ಸ್ಥಳಾಂತರಿಸಲು ಸೂಚಿಸಲಾಗಿದೆ. ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಚೆನ್ನಮ್ಮ ಕಾಲೇಜು ಸಮೀಪ ಇರುವ ಕುಡಿಯುವ ನೀರಿನ ಟ್ಯಾಂಕ್ ಬಳಿ ನಿರ್ಮಿಸಲಾದ ತಡೆಗೋಡೆ ಕುಸಿದುಹೋಗಿದ್ದು, ನೀರಿನ ಟ್ಯಾಂಕ್ ಕೂಡ ಶಿಥಿಲಾವಸ್ಥೆಯಲ್ಲಿದ್ದು,ಪಕ್ಕದಲ್ಲಿಯೇ ಶಾಲಾ ವಿದ್ಯಾರ್ಥಿಗಳ ಕೊಠಡಿ ಇದ್ದು ಅನಾಹುತ ಎದುರಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮತ್ತು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಭೇಟಿ ನೀಡಿ, ದುರಸ್ತಿಗೆ ಮನವಿ ಮಾಡಿದ್ದಾರೆ.