ಸಾರಾಂಶ
ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕನ್ನಡಪಭ ವಾರ್ತೆ ಸೋಮವಾರಪೇಟೆ
ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಗಾಳಿ ಮಳೆಗೆ ವಿದ್ಯುತ್ ಮಾರ್ಗದ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.ಶಾಂತಳ್ಳಿ ಹೋಬಳಿಯಾದ್ಯಂತ ಭಾರಿ ಮಳೆಯಾಗುತ್ತಿದೆ. ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಕ್ಯ ಗ್ರಾಮದ ನಿವಾಸಿ ಚಾಮೆರ ಲಕ್ಷ್ಮಣ ಎಂಬವರ ಕೊಟ್ಟಿಗೆ ಕುಸಿದು ಹೋರಿಯೊಂದು ಮೃತಪಟ್ಟಿದೆ. ಸ್ಥಳಕ್ಕೆ ಪಶುಪಾಲನಾ ಇಲಾಖೆಯ ಡಾ. ಕೆ. ನಾಗರಾಜು ತೆರಳಿ ಪರಿಶೀಲಿಸಿದರು. ಮುಕ್ಕೋಡ್ಲು ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ಆವರಣ ಮಳೆಗೆ ನೀರಿನಿಂದ ಆವೃತ್ತವಾಗಿದೆ. ಗ್ರಾಮ ಸಂಪರ್ಕ ರಸ್ತೆಯೊಂದರ ಮೇಲೆ ನೀರು ತುಂಬಿ ಹರಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿತು.
ಕಲ್ಕಂದೂರು ಗ್ರಾಮದ ಹಸೈನಾರ್ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ದುಂಡಳ್ಳಿ ಗ್ರಾಮದ ಜಯಪ್ಪ ಎಂಬವರ ದನದ ಕೊಟ್ಟಿಗೆಗೆ ಹಾನಿಯಾಗಿದೆ. ಹುಲುಸೆ ಗ್ರಾಮದ ಲಕ್ಷ್ಮಣ ಎಂಬವರ ವಾಸದ ಮನೆಗೆ ಹಾನಿಯಾಗಿದೆ. ಶಾಂತಳ್ಳಿ ಹೋಬಳಿಯ ತೋಳೂರುಶೆಟ್ಟಳ್ಳಿ ಗ್ರಾಮದ ವಿ.ಕೆ. ಇಂದಿರಾ ಅವರ ವಾಸದ ಮನೆಗೆ ಹಾನಿಯಾಗಿದೆ. ಹರಗ ಗ್ರಾಮದ ಅಚಿಜನ್ ಎಂಬವರ ವಾಸದ ಮನೆಯ ಗೋಡೆ ಮತ್ತು ಮೇಲ್ಛಾವಣಿಗೆ ಹಾನಿಯಾಗಿದೆ. ಶುಂಟಿ ಮಂಗಳೂರು ಗ್ರಾಮದ ಇಂದ್ರಮ್ಮ ವಾಸದ ಮನೆಗೆ ಹಾನಿಯಾಗಿದೆ.