ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ

| Published : Jul 02 2025, 11:52 PM IST

ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರಕುಗೊಂಡಿದೆ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

115.5 ಮಿಲಿ ಮೀಟರ್ ನಿಂದ 204 ಮಿಲಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಗಾಳಿ ಮಳೆಗೆ ಮಡಿಕೇರಿ ಮ್ಯಾನ್ಸ್ ಕಾಂಪೌಡ್ ಬಳಿಯ ಕೊಡವರ ಕೋಲ್ ಮಂದ್‌ನ ಐತಿಹಾಸಿಕ ಅತ್ತಿ ಮರ ಅರ್ಧ ಭಾಗ ಬಿದ್ದಿದೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.06 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1437.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 876 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ 20.33 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 9.35 ಮಿ.ಮೀ. ಮಳೆಯಾಗಿದೆ, ಪೊನ್ನಂಪೇಟೆ ತಾಲೂಕಿನಲ್ಲಿ 21.46 ಮಿ.ಮೀ. ಮಳೆಯಾಗಿದೆ, ಸೋಮವಾರಪೇಟೆ ತಾಲೂಕಿನಲ್ಲಿ 32.25 ಮಿ.ಮೀ. ಮಳೆಯಾಗಿದೆ. ಕುಶಾಲನಗರ ತಾಲೂಕಿನಲ್ಲಿ 11.90 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 11, ನಾಪೋಕ್ಲು 19.40, ಸಂಪಾಜೆ 26.50, ಭಾಗಮಂಡಲ 24.40, ವಿರಾಜಪೇಟೆ 9.20, ಅಮ್ಮತ್ತಿ 9.50, ಹುದಿಕೇರಿ 12.20, ಶ್ರೀಮಂಗಲ 64.60, ಪೊನ್ನಂಪೇಟೆ 6, ಬಾಳೆಲೆ 3.04, ಸೋಮವಾರಪೇಟೆ 30, ಶನಿವಾರಸಂತೆ 26, ಶಾಂತಳ್ಳಿ 69, ಕೊಡ್ಲಿಪೇಟೆ 4, ಕುಶಾಲನಗರ 5.80, ಸುಂಟಿಕೊಪ್ಪ 18 ಮಿ.ಮೀ.ಮಳೆಯಾಗಿದೆ.