ಮಳವಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆ..!

| Published : Oct 12 2025, 01:00 AM IST

ಸಾರಾಂಶ

ಮಳವಳ್ಳಿ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಹಳ್ಳಗಳಲ್ಲೂ ಜಲಧಾರೆ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಹಳ್ಳಗಳಲ್ಲೂ ಜಲಧಾರೆ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ.

ಭಾರೀ ಮಳೆಯಿಂದ ಮಳವಳ್ಳಿ ದೊಡ್ಡ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಮಳೆಯಿಂದಾಗಿ ಮಾರೇಹಳ್ಳಿ, ನೆಟ್ಕಲ್ ಕೆರೆ, ಮಿಕ್ಕೆರೆ ಕೆರೆ ಸೇರಿದಂತೆ ಹಲವಾರು ಕೆರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆಲವು ಕೆರೆಗಳು ಕೋಡಿ ಬೀಳುವ ಹಂತದಲ್ಲಿವೆ.

ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿರುವ ದೃಶ್ಯಗಳು ಕಂಡುಬರುತ್ತಿವೆ.

ಉತ್ತಮ ಮಳೆಯಿಂದಾಗಿ ಕೃಷಿ ಚಟುವಟಿಕೆಗೆ ಹೆಚ್ಚಿನ ಅನುಕೂಲವಾಗಿದೆ. ಬೆಳೆದು ನಿಂತಿರುವ ಭತ್ತ, ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳಿಗೆ ನೀರಿನ ಆಸರೆ ದೊರಕಿದಂತಾಗಿದೆ. ಮಳೆಯಿಂದ ತಾಲೂಕಿನ ಯಾವುದೇ ಭಾಗದಲ್ಲಿ ಬೆಳೆಹಾನಿ, ಪ್ರಾಣಹಾನಿ, ಆಸ್ತಿ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ.

ಭಾರೀ ಮಳೆಗೆ ಮನೆ ಗೋಡೆ ಕುಸಿತ

ಕಿಕ್ಕೇರಿ:

ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಸಾಸಲು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಅಪಾರ ಹಾನಿ ಸಂಭವಿಸಿರುವ ಘಟನೆ ನಡೆದಿದೆ. ಗರಾಮದ ದುಬಾರಪ್ಪನ ಪುತ್ರ ಶಿವಕುಮಾರ್ ಹಳೆಯ ಮಣ್ಣಿನ ಗೋಡೆ ಮನೆಯಲ್ಲಿ ವಾಸವಾಗಿದ್ದರು. ಮಳೆಯಿಂದಾಗಿ ಮಣ್ಣಿನಗೋಡೆ ಶೀತವಾಗಿ ಕುಸಿದಿದೆ. ಪರಿಣಾಮ ಮನೆ ಮೇಲ್ಚಾವಣೆ, ತೊಲೆ, ಹೆಂಚುಗಳು ಹಾಳಾಗಿವೆ. ಮನೆಯಲ್ಲಿದ್ದ ಬಟ್ಟೆ, ಧವಸಧಾನ್ಯ, ಪೀಠೋಪಕರಣ ನಾಶವಾಗಿದೆ. ಗ್ರಾಮ ಲೆಕ್ಕಿಗ ಪ್ರಸನ್ನ ಸ್ಥಳ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ಸೂಕ್ತ ಪರಿಹಾರಕ್ಕೆ ವರದಿ ನೀಡಲಾಗುವುದು ಎಂದು ತಿಳಿಸಿದರು.