ಸಾರಾಂಶ
ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು.
ಗದಗ: ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು. ಮುಂಡರಗಿ ತಾಲೂಕಿನ ಡಂಬಳ ಹೋಬಳಿ ವ್ಯಾಪ್ತಿ ಹಾಗೂ ಕಪ್ಪತ್ತಗುಡ್ಡ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದೆ. ಮಳೆಗಿಂತಲೂ ಜೋರಾಗಿದ್ದ ಗುಡುಗು ಸಿಡಿಲಿನ ಅಬ್ಬರಕ್ಕೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಸಿಡಿಲಿನ ಅಬ್ಬರಕ್ಕೆ ಅವಳಿ ನಗರದ ಹಲವಾರು ಬಡಾವಣೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು.
ಅವಳಿ ನಗರದ ಪ್ರಮುಖ ಸಂಪರ್ಕ ಕಲ್ಪಿಸುವ ರಸ್ತೆಯಾದ ಪಂಚರ ಹೊಂಡದ ಬಳಿ ವ್ಯಾಪಕ ಪ್ರಮಾಣದ ಚರಂಡಿ ನೀರು ರಸ್ತೆ ಮೇಲೆಯೇ ಹರಿದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡಿದರು.