ಚಿಕ್ಕಮಗಳೂರು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗಕ್ಕಿಂತ ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿದೆ. ಚಿಕ್ಕಮಗಳೂರು, ತರೀಕೆರೆ ಹಾಗೂ ಕಡೂರು ತಾಲೂಕುಗಳ ಹಲವು ಭಾಗಗಳಲ್ಲಿ ಮಳೆಯಾಗಿದೆ.
- ಬೆಳವಾಡಿ, ಕಳಸಾಪುರ ಸೇರಿದಂತೆ ಬಯಲುಸೀಮೆ ಭಾಗಗಳಲ್ಲಿಯೂ ಮಳೆ ಅಬ್ಬರ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗಕ್ಕಿಂತ ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿದೆ. ಚಿಕ್ಕಮಗಳೂರು, ತರೀಕೆರೆ ಹಾಗೂ ಕಡೂರು ತಾಲೂಕುಗಳ ಹಲವು ಭಾಗಗಳಲ್ಲಿ ಮಳೆಯಾಗಿದೆ.ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಬಯಲುಸೀಮೆ ಭಾಗಗಳಲ್ಲಿಯೂ ಮಳೆ ಅಬ್ಬರಿಸಿದೆ. ಜಿಲ್ಲೆಯ ಮಲೆನಾಡಿನ ಆಯ್ದ ಪ್ರದೇಶಗಳಲ್ಲೂ ಮಳೆ ಮುಂದುವರಿದಿದೆ. ಗುರುವಾರದಿಂದಲೇ ಜಿಲ್ಲೆಯ ವಿವಿಧೆಡೆ ಮಳೆ ಯಾಗುತ್ತಿದ್ದು, ಶುಕ್ರವಾರವೂ ಮಳೆ ಸುರಿಯುತ್ತಿರುವುದರಿಂದ ಜನರಲ್ಲಿ ಮಳೆ ನಿರೀಕ್ಷೆ ಹೆಚ್ಚಾಗಿದೆ.
ಮಳೆಗಾಗಿ ಕಾಯುತ್ತಿದ್ದ ರೈತರಿಗೆ ಆಶಾಕಿರಣಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಾಡಿಕೆ ಮಳೆಯ ಅರ್ಧದಷ್ಟೂ ಮಳೆಯಾಗಿಲ್ಲ ಎಂಬ ಆತಂಕ ಕೃಷಿಕರನ್ನು ಕಾಡುತ್ತಿದೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕಾಫಿ ಮತ್ತು ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಾಫಿ ಹಾಗೂ ಅಡಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಸಕಾಲದಲ್ಲಿ ಉತ್ತಮ ಮಳೆಯಾಗುವುದು ಅನಿವಾರ್ಯ. ಮಳೆಗಾಗಿ ಆಕಾಶದತ್ತ ಮುಖಮಾಡಿದ್ದ ಮಲೆನಾಡಿನ ಬೆಳೆಗಾರರು ಇದೀಗ ಹಿಂಗಾರು ಮಳೆ ನಿರೀಕ್ಷೆಯಲ್ಲಿದ್ದಾರೆ. ಮಳೆ ಕೊರತೆ ಯಿಂದ ತೇವಾಂಶ ಕಳೆದುಕೊಂಡಿರುವ ತೋಟಗಳಿಗೆ ಉತ್ತಮ ಮಳೆ ಸಿಕ್ಕರೆ ಬೆಳೆಗಳಿಗೆ ಚೇತರಿಕೆ ದೊರೆಯುವ ಆಶಾಭಾವನೆ ರೈತರಲ್ಲಿದೆ.ಹಿಂಗಾರು ಮಳೆಯ ನಿರೀಕ್ಷೆಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ. ಹಿಂಗಾರು ಮಳೆಯಾದರೂ ಕೈಹಿಡಿಯಲಿದೆ ಎಂಬ ನಿರೀಕ್ಷೆ ರೈತರಲ್ಲಿದೆ. ಅದರಲ್ಲೂ ಕಾಫಿ, ಅಡಕೆ ಸೇರಿದಂತೆ ವಿವಿಧ ಬೆಳೆಗಳ ಇಳುವರಿ ಹಾಗೂ ತೋಟಗಳ ನಿರ್ವಹಣೆಗೆ ಮಳೆ ಪ್ರಮುಖವಾಗಿದೆ.ಜಿಲ್ಲೆಯ ಬಯಲುಸೀಮೆ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ ಕಂಡುಬಂದಿದ್ದು, ಮಲೆನಾಡಿನ ಕೆಲವು ಭಾಗಗಳಲ್ಲಿಯೂ ಮಳೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇದೆ.ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅ.23ರಿಂದ 25ರವರೆಗೆ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಹೀಗಾಗಿ ಕಾಫಿನಾಡಿನ ಜನರು ಹಾಗೂ ರೈತರು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದಾರೆ.ಕೊಪ್ಪ: ಶುಕ್ರವಾರ ಮಧ್ಯಾಹ್ನದ ನಂತರ ಕೊಪ್ಪ ತಾಲೂಕಿನ ಜಯಪುರ, ಅಗಳಗಂಡಿ, ಉತ್ತಮೇಶ್ವರ ,ಮಕ್ಕಿಕೊಪ್ಪ ಸೇರಿದಂತೆ ಹರಿಹರಪುರ, ನಿಲುವಾಗಿಲು ಭಾಗದಲ್ಲಿ ಸಹ ಹಲವು ಕಡೆ ಸಿಡಿಲು ಗುಡುಗು ಸಹಿತ ಮಳೆಯಾಗಿದೆ. ತಾಲೂಕಿನ ಬೊಮ್ಲಾಪುರ, ಹೊಕ್ಕಳಿಕೆ ಹೊಲಗೋಡು ಸೇರಿದಂತೆ ಹಲವೆಡೆ ಭಾರಿ ಮಳೆಯಾದ ಬಗ್ಗೆ ವರದಿಯಾಗಿದೆ.ಬಿಸಿಲಿನ ತಾಪದಿಂದ ಹೈರಾಣಗಿದ್ದ ಪಟ್ಟಣಕ್ಕೆಮಧ್ಯಾಹ್ನದ ನಂತರ ತುಂತುರು ಮಳೆ ಆಗಮನವಾಯಿತು. ಗುರುವಾರ ಸಂಜೆ 7.30 ರ ಸಮಯದಲ್ಲಿ ಪಟ್ಟಣದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿತ್ತು. ಹವಾಮಾನ ಇಲಾಖೆ ವರದಿ ಪ್ರಕಾರ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಕೆಲವೆಡೆ ಈಗಾಗಲೇ ಕೃಷಿಕರು ಈ ವರ್ಷದ ಫಸಲಿನ ಅಡಕೆ ಕೊನೆ ತೆಗೆದು ಅಡಕೆ ಕೊಯ್ಲು ಮಾಡಲು ಸಿದ್ಧತೆ ನಡೆಸಿದ್ದು, ಅಕಾಲಿಕ ಮಳೆ ಮುಂದುವರಿದಲ್ಲಿ ಅಡಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವ ಸ್ಥಿತಿ ಎದುರಾಗಿದೆ.