ಸಾರಾಂಶ
ಹೆಬ್ರಿ ಯುವ ಕಾಂಗ್ರೆಸ್ ಸಮಿತಿ ಹೆಬ್ರಿ ಬ್ಲಾಕ್ ಆಶ್ರಯದಲ್ಲಿ ಹೆಬ್ರಿ ಬಸ್ ನಿಲ್ದಾಣದ ಬಳಿ ಗ್ಯಾಸ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ ಎಂದು ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಹೇಳಿದ್ದಾರೆ.
ಅವರು ಹೆಬ್ರಿ ಯುವ ಕಾಂಗ್ರೆಸ್ ಸಮಿತಿ ಹೆಬ್ರಿ ಬ್ಲಾಕ್ ಆಶ್ರಯದಲ್ಲಿ ಹೆಬ್ರಿ ಬಸ್ ನಿಲ್ದಾಣದ ಬಳಿ ಗ್ಯಾಸ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಯೋಜಿಸಲಾದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಗ್ಯಾಸ್ ಸಬ್ಸಿಡಿ ತೆಗೆದು ಬಡವರಿಗೆ ಅನ್ಯಾಯ ಮಾಡಿದೆ. ಡೀಸೆಲ್, ಪೆಟ್ರೋಲ್ ಸೇರಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಬಡವರ ರಕ್ತ ಕುಡಿಯುವ ಕೆಲಸ ಮಾಡುತ್ತಿದೆ ಎಂದರು.ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರದೀಪ್ ಬೇಲಾಡಿ, ಹೆಬ್ರಿ ಯುವ ಕಾಂಗ್ರೆಸ್ ಅಧ್ಯಕ್ಷ ಪರೀಕ್ಷಿತ್, ಕೇಂದ್ರ ಸರ್ಕಾರದ ಜನವಿರೋಧ ನೀತಿಯನ್ನು ಖಂಡಿಸಿ ಮಾತನಾಡಿದರು.ಹೆಬ್ರಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನವೀನ್ ಅಡ್ಯಂತ್ತಾಯ, ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಶೆಟ್ಟಿ, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಶಂಕರ ಸೇರಿಗಾರ್, ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯ ಜನಾರ್ದನ್ ಎಚ್. ಬೆಳಂಜೆ, ಹರೀಶ್ ಪೂಜಾರಿ, ಮಂಜುನಾಥ್, ಸುಮಾ ಅಡ್ಯಂತ್ತಾಯ, ಸೂರಜ್, ಮಿಥುನ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.ಹೆಬ್ರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸದಸ್ಯರು, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.