ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

| Published : Nov 06 2025, 02:45 AM IST

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಕಾರ್ಕಳ: ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿದ್ವಾಂಸ, ವಿಮರ್ಶಕ, ಸಾಹಿತಿ ಹಾಗೂ ನಿವೃತ್ತ ಗ್ರೇಡ್-1 ಪ್ರಾಂಶುಪಾಲ ಡಾ. ಪಾದೆಕಲ್ಲು ವಿಷ್ಣು ಭಟ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾಂತ್ರೀಕರಣಗೊಂಡ ಆಧುನಿಕ ಜಗತ್ತಿನಲ್ಲಿ ಕಣ್ಮರೆಯಾಗುತ್ತಿರುವ ಮಾನವೀಯ ಮೌಲ್ಯಗಳ ಕುರಿತು ಕಳವಳ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಗುರುಹಿರಿಯರ ಪ್ರೀತಿ ಮತ್ತು ಕಾಳಜಿಯನ್ನು ಮರೆತರೆ ಅವರ ಸಾಧನೆ ನಿರರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವದ ಮೂಲಕ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಬೆಳೆಸಿಕೊಳ್ಳಬೇಕೆಂದು ಹೇಳಿದರು.ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಷ್ಮಾ ರಾವ್ ಕೆ. ಸ್ವಾಗತಿಸಿದರು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಶೆಟ್ಟಿ ವೇದಿಕೆ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಐಕ್ಯೂಎಸಿ ಸಂಚಾಲಕ ಡಾ. ಗಣೇಶ್ ಎಸ್., ಸಾಂಸ್ಕೃತಿಕ ಸಮಿತಿ ಸಂಚಾಲಕಿ ಜ್ಯೋತಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಕುಮಾರ್ ಎಂ., ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಅನಿಲ್, ಉಪಾಧ್ಯಕ್ಷೆ ಅಂಕಿತಾ, ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಅದಿತಿ, ಮತ್ತು ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಪವಾಸ್ಕರ್ ಇದ್ದರು.

ಸಂಗೀತ ಬಳಗದಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಅಂತಿಮ ಬಿ.ಕಾಂ ವಿದ್ಯಾರ್ಥಿನಿಯರಾದ ಪವಿತ್ರಾ ಹಾಗೂ ಶ್ರಾವಣಿ ನಿರೂಪಿಸಿದರು. ಎಂ.ಕಾಂ ಪ್ರತಿನಿಧಿ ಸ್ನೇಹಾ ವಂದಿಸಿದರು.