ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

| Published : Jan 28 2025, 12:45 AM IST

ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆಯಲಿರುವ ಹೆಬ್ರಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆಯಲಿರುವ ಹೆಬ್ರಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಸರ್ವರ ಸಹಕಾರವನ್ನು ಕೋರಿ ಸಮ್ಮೇಳನ ಯಶಸ್ವಿಗೊಳಿಸಲು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹೆಬ್ರಿ ತಾಲೂಕು ಘಟಕ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಮುದ್ದೂರು ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಗಣೇಶ್ ಹಾಂಡ, ಸಂಚಾಲಕ ರಮಾನಂದ ಶೆಟ್ಟಿ, ಗೌರವ ಸಲಹೆಗಾರರಾದ ಮೋಹನ ದಾಸ್ ನಾಯಕ್, ಬೈಕಾಡಿ ಮಂಜುನಾಥ್ ರಾವ್ ಎಲಿಕೊಡು, ಲಕ್ಷ್ಮೀನಾರಾಯಣ ನಾಯ್ಕ್ ಕನ್ಯಾನ, ಸುರೇಶ್ ಶೆಟ್ಟಿ ಹುಣ್ಸೇಡಿ, ವಿಶ್ವನಾಥ ನಾಯಕ್, ನಾಯರ್ಕೋಡು ಸಂತೋಷ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಗುಲಾಬಿ, ಸ್ವಾಗತ ಸಮಿತಿಯ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು, ಶಿವಪುರ ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಎಲ್ಲ ಶಿಕ್ಷಕರು, ಪರಿಶ್ರಮ ಸಂಘಟನೆಯ ಸದಸ್ಯರು, ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ಡಾ. ಪ್ರವೀಣ್ ಕುಮಾರ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.