ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡುತಾಲೂಕಿನ ಹೆಗ್ಗಡಹಳ್ಳಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರೇವಮ್ಮ ಆಯ್ಕೆಯಾದರು.19 ಸದಸ್ಯರ ಬಲವನ್ನು ಹೊಂದಿರುವ ಹೆಗ್ಗಡಹಳ್ಳಿ ಗ್ರಾಪಂ 11 ಬಿಜೆಪಿ ಬೆಂಬಲಿತ ಸದಸ್ಯರು, 8 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು.ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಯಾಗಿ ರೇವಮ್ಮ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಸ್. ರಾಣಿ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೇವಮ್ಮ 10 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಸ್. ರಾಣಿ 8 ಮತಗಳನ್ನು ಪಡೆದು ಪರಾಭವಗೊಂಡರು. ಶಿವನಿರ್ಮಲಾ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಗೈರು ಹಾಜರಾಗಿದ್ದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗರಾಜು, ಮುಖಂಡರಾದ ರಾಜು, ವಕೀಲರಾದ ಸೋಮಣ್ಣ, ಗ್ರಾಪಂ ಸದಸ್ಯರಾದ ರಂಗಸ್ವಾಮಿ, ಅಶೋಕ್, ಬಸವರಾಜು, ಪುಟ್ಟಸಿದ್ದಮ್ಮ, ಗೀತಾ, ಜ್ಯೋತಿ, ಮುಖಂಡರಾದ ಶಿವಶಂಕರ್, ಕೃಷ್ಣ ಶೆಟ್ಟಿ, ಲೋಕೇಶ್, ಮಹೇಶ್, ಶೇಖರ್, ಚಂದ್ರು, ಕಾಂಗ್ರೆಸ್ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ್ ಇದ್ದರು.