ಸಾರಾಂಶ
ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗ ಜಿಲ್ಲಾಮಟ್ಟದ ಕನ್ನಡ ಚಲನಚಿತ್ರ ಗೀತೆಗಳ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಭದ್ರಾವತಿ
ಕಲಾವಿದರು ನಮ್ಮಂತೆ, ಅವರಿಗೂ ಒಂದು ಬದುಕಿದ್ದು, ಅವರ ಸಂಕಷ್ಟದ ಬದುಕಿನ ಏಳ್ಗೆಗೆ ನಾವೆಲ್ಲರೂ ಕೈಜೋಡಿಸ ಬೇಕೆಂದು ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್ ಹೇಳಿದರು.ಅವರು ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗ ಜಿಲ್ಲಾಮಟ್ಟದ ಕನ್ನಡ ಚಲನಚಿತ್ರ ಗೀತೆಗಳ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಭಾ ಪುರಸ್ಕಾರ: ಹಿರಿಯ ಕಲಾವಿದರಾದ ಎಸ್.ಬಿ.ಶಿವಲಿಂಗಪ್ಪನವರಿಗೆ ಮತ್ತು ಅಪೇಕ್ಷ ಮಂಜುನಾಥರಿಗೆ ದಿವಂಗತ ಗೀತಾಂಜಲಿ ಶ್ರೀನಿವಾಸ್ ರಾಜ್ಯ ಪ್ರಶಸ್ತಿ ಹಾಗೂ ಭದ್ರಾವತಿ ವಾಸುರವರಿಗೆ ದಿ.ಜಯಶೀಲನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ಹಿರಿಯ ಕಲಾವಿದರನ್ನು ಸನ್ಮಾಸಲಾಯಿತು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಬಿ.ಎ.ಮಂಜುನಾಥ್, ಪ್ರಮುಖರಾದ ಶಿಮುಲ್ ಸದಸ್ಯ ಎಸ್.ಕುಮಾರ್, ಜಿ.ಪಂ. ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಬಾಲಕೃಷ್ಣ, ಯುವ ಮುಖಂಡ ಬಿ.ಎಸ್ ಗಣೇಶ್, ಉದ್ಯಮಿ ಶಿವಕುಮಾರ್, ಭೋವಿ ಸಮಾಜದ ಅಧ್ಯಕ್ಷ ಶಿವುಪಾಟೀಲ್, ನ್ಯಾಯವಾದಿ ವೆಂಕಟೇಶ್, ಜಿಲ್ಲಾ ಪಡಿತರ ವಿತರಕರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ, ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.