ಸಾರಾಂಶ
ಆರೋಗ್ಯ ಇಲಾಖೆ ಹಮ್ಮಿಕೊಂಡು ತಂಬಾಕು ಮುಕ್ತ ಗ್ರಾಮ ಮಾಡುವ ಕಾರ್ಯಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಬೇಕು
ನರಗುಂದ: ತಾಲೂಕಿನಲ್ಲಿ ಆರೋಗ್ಯ ಇಲಾಖೆಯಿಂದ 5 ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ನಿರ್ಣಯಿಸಿದ್ದು, ಇದಕ್ಕೆ ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಾಲೂಕಾಸ್ಪತ್ರೆ ವೈದ್ಯಾಧಿಕಾರಿ ಡಾ. ರೇಣುಕಾ ಕೊರವನ್ನವರ ಹೇಳಿದರು.
ಅವರು ಗುರುವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ನಡೆದ ಕುಷ್ಟರೋಗ ಪತ್ತೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.ತಂಬಾಕು ಸೇವನೆಯಿಂದ ಮಾರಕ ಕಾಯಿಲೆ ಬರುವುದರಿಂದ ಗ್ರಾಮೀಣ ಭಾಗದ ಐದು ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಯೋಜನೆ ಹಮ್ಮಿಕೊಂಡಿದ್ದು. ಆದ್ದರಿಂದ ಕಾರ್ಯಕ್ರಮಕ್ಕೆ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಿದರೆ ಮಾತ್ರ ಯೋಜನೆ ಯಶ್ವಸಿಯಾಗಲು ಸಾಧ್ಯ ಎಂದರು. ತಹಸೀಲ್ದಾರ ಶ್ರೀಶೈಲ ತಳವಾರ ಮಾತನಾಡಿ, ಆರೋಗ್ಯ ಇಲಾಖೆ ಹಮ್ಮಿಕೊಂಡು ತಂಬಾಕು ಮುಕ್ತ ಗ್ರಾಮ ಮಾಡುವ ಕಾರ್ಯಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಡಾ. ಅನಿತಾ ಬಗಾಡೆ, ಸಂತೋಷ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಜಿ.ವಿ. ಹೂಗಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಂ. ಬಡಿಗೇರ, ಬಿ.ವಿ. ಕೊಣ್ಣೂರ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಎಚ್. ಹುಲಕೋಟಿ, ಮೋಹನ ಉಪವಾಸಿ, ಎಸ್.ಬಿ. ಕುರಹಟ್ಟಿ, ಬಿ.ಎಂ. ಕೌಜಗೇರಿ, ಆರ್.ಎಸ್. ಹಿರೇಹೊಳಿ ಇದ್ದರು.