ಜಿಲ್ಲೆಯನ್ನು ಮಲೇರಿಯಾ ಮುಕ್ತವನ್ನಾಗಿಸಲು ಸಹಕರಿಸಿ

| Published : May 05 2024, 02:01 AM IST

ಜಿಲ್ಲೆಯನ್ನು ಮಲೇರಿಯಾ ಮುಕ್ತವನ್ನಾಗಿಸಲು ಸಹಕರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯನ್ನು ೨೦೨೫ ಏಪ್ರಿಲ್ ೨೫ಕ್ಕೆ ಮಲೇರಿಯಾ ಮುಕ್ತವನ್ನಾಗಿ ಮಾಡುವ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡು ಅನುಷ್ಠಾನ ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರಂ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯನ್ನು ೨೦೨೫ ಏಪ್ರಿಲ್ ೨೫ಕ್ಕೆ ಮಲೇರಿಯಾ ಮುಕ್ತವನ್ನಾಗಿ ಮಾಡುವ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡು ಅನುಷ್ಠಾನ ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರಂ ಹೇಳಿದರು.ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವತಿಯಿಂದ ಪತ್ರಕರ್ತರಿಗೆ ಅಡ್ವೊಕೆಸಿ ಕಾರ್ಯಾಗಾರದಲ್ಲಿ ಮಾತನಾಡಿ, ಜ್ವರದ ಲಕ್ಷಣಗಳು ಇರುವವರಿಗೆ ರಕ್ತಲೇಪನದ ಮಾದರಿ ಸಂಗ್ರಹಣೆ ಮಾಡಲಾಗುತ್ತಿದೆ, ವೃತ್ತಿ ಅರಸಿ ಬಂದ ವಲಸಿಗರನ್ನು ತಪಾಸಣೆ ಮಾಡಲಾಗುತ್ತಿದೆ, ಅಲ್ಲದೇ ಎಲ್ಲಿಂದಲಾದರೂ ಬರಲಿ ಮಲೇರಿಯಾ ಲಕ್ಷಣಗಳು ಇರುವವರು ರಕ್ತ ಪರೀಕ್ಷೆ ಮಾಡಿಸಿಕೊಂಡು ಖಾತ್ರಿ ಪಡಿಸಿಕೊಂಡು ಜ್ವರಕ್ಕೆ ಚಿಕಿತ್ಸೆ ಪಡೆಯಬೇಕು. ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಕಾರದ ಜೊತೆ ಮಾದ್ಯಮದ ಸಹಕಾರವು ಅಗತ್ಯ ಇದ್ದು ಎಲ್ಲರೂ ಕೈಜೋಡಿಸಬೇಕು ಎಂದರು.ಪ್ರಸ್ತುತ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಮಲೇರಿಯಾ ನಿಯಂತ್ರಣಕ್ಕೆ ೧೯೫೮ರ ನಂತರ ಕೈಗೊಂಡ ಕಾರ್ಯಕ್ರಮಗಳೇ ಅಡಿಪಾಯವಾಗಿದೆ, ಕೊವಿಡ್ ನಿಯಂತ್ರಣಕ್ಕೂ ಇದೇ ಮಾದರಿ ಅನುಸರಿಸಲಾಯಿತು, ಕೊವಿಡ್ ಶೀಲ್ಟ್‌ ಬಗ್ಗೆ ಯಾರು ಗಾಬರಿಪಡುವ ಅಗತ್ಯವಿಲ್ಲ ಎಂದರು.ಮಾದ್ಯಮಗಳು ಮಲೇರಿಯಾ ಸೇರಿದಂತೆ ಇತರ ಕಾಯಿಲೆಗಳ ಬಗ್ಗೆ ಎದರಿಸುವುದಕ್ಕಿಂತ ಎಚ್ಚರಿಕೆ ಮತ್ತು ಜಾಗೃತಿ ಮೂಡಿಸುವ ಸುದ್ದಿಗಳಿಗೆ ಮಹತ್ವ ನೀಡಿ ಎಂದು ಮನವಿ ಮಾಡಿದರು. ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಿ:

ಮಲೇರಿಯಾ ಒಬ್ಬರಿಂದೊಬ್ಬರಿಗೆ ಹರಡದಂತೆ ಮೈತುಂಬ ಬಟ್ಟೆ ಹಾಕುವುದು, ಮಲಗುವಾಗ, ಸೊಳ್ಳೆ ಪರದೆ ಬಳಸುವುದು, ಸೊಳ್ಳೆ ನಿರೋಧಕ ಕ್ರೀಮ್, ಕಾಯಿಲ್‌ಗಳನ್ನು ಬಳಸುವುದು, ಮುಖ್ಯವಾಗಿ ಸೊಳ್ಳೆಗಳ ಉತ್ಪತ್ತಿ ಆಗದಂತೆ ನೋಡಿಕೊಳ್ಳದಂತೆ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.ನಿರ್ಲಕ್ಷ್ಯ ಮಾಡಬೇಡಿ:

ಜಿಲ್ಲೆಯಲ್ಲಿ ಆಶ್ರಿತ ರೋಗಗಳ ನಿಯಂತ್ರಣಕ್ಕಾಗಿ ಒಂದು ತಂಡವಾಗಿ ಕೆಲಸ ಮಾಡಲಾಗುತ್ತಿದೆ, ಜಾಗೃತಿ ಕಾರ್ಯಕ್ರಮಗಳು, ಅರಿವು ಮೂಡಿಸಲು ಮನೆ ಮನೆಗೆ ಭೇಟಿ, ತಪಾಸಣೆ ಮಾಡಲಾಗುತ್ತಿದ್ದು, ಜ್ವರ, ಕೆಮ್ಮು, ನೆಗಡಿ ಬಂದರೆ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರಲ್ಲಿ ತೋರಿಸಿಕೊಳ್ಳಿ ಎಂದರು.ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ರಾಜೇಶ್ ಕುಮಾರ್ ಮಾತನಾಡಿ, ದೇಶದಲ್ಲಿ ಮಲೇರಿಯಾ ರೋಗವನ್ನು ೨೦೨೫ ರೊಳಗಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಲಾಗಿದ್ದು ಅದಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರು ಸ್ವಪ್ರೇರಿತರಾಗಿ ಕೈಜೋಡಿಸಬೇಕು ಎಂದರು. ಮಲೇರಿಯಾ ಪ್ಲಾಸ್ಮೋಡಿಯಮ್ ಎಂಬ ಪರಾವಲಂಬಿಗಳ ಮೂಲಕ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ ಸೋಂಕಿತ ಹೆಚ್ಚು ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಜನರು ಮಲೇರಿಯಾ ರೋಗಕ್ಕೆ ತುತ್ತಾಗುತ್ತಾರೆ ಎಂದರು.ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ ಜೊತೆಗೆ ಮೈ ಕೈನೋವು ಇವರಿಗೆ ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ದೇಶದಲ್ಲಿ ಸಾಕಷ್ಟು ಸುಧಾರಣೆಗಳ ಹೊರತಾಗಿಯೂ ಮಲೇರಿಯಾ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಮಲೇರಿಯಾ ಕೇವಲ ನಮ್ಮ ಭಾರತ ದೇಶದ ಸಮಸ್ಯೆಯಷ್ಟೇ ಅಲ್ಲ. ಇದು ಇಡೀ ವಿಶ್ವದಾದ್ಯಂತ ಅತ್ಯಂತ ಮಾರಕ ಕಾಯಿಲೆ ಎಂಬ ಕುಖ್ಯಾತಿ ಪಡೆದಿದೆ. ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆ ಪ್ಲಾಸ್ಮೊಡಿಯಂ ಎಂಬ ಪ್ಯಾರಾಸೈಟ್ ನಿಂದ ತಾನೂ ಸೋಂಕಿಗೆ ಒಳಗಾಗಿ ಮನುಷ್ಯರಿಗೂ ಸೋಂಕನ್ನು ಹರಡುತ್ತದೆ ಎಂದರು. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ ಜೊತೆಗೆ ಮೈ ಕೈನೋವು ಇವರಿಗೆ ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಒದಗಿಸಿದರೆ ವಿಪರೀತ ಕಾಯಿಲೆ ಬಿದ್ದು ಹಾಸಿಗೆ ಹಿಡಿದು ಕೊನೆಗೆ ಸಾವು ಸಂಭವಿಸುವುದನ್ನು ಪರಿಣಾಮಕಾರಿಯಾಗಿ ತಪ್ಪಿಸಬಹುದು ಎಂದರು,

ಮಲೇರಿಯಾ ಜ್ವರ ಹೆಚ್ಚಾದಂತೆ ವ್ಯಕ್ತಿಗೆ ಮೂತ್ರ ಪಿಂಡಗಳ ಹಾನಿ, ತಲೆ ನೋವು, ಭೇದಿ, ಮೈಕೈ ನೋವು, ವಿಪರೀತ ಆಯಾಸ, ಅತಿವ ಜ್ವರ, ವಾಕರಿಕೆ ಮತ್ತು ವಾಂತಿ, ಮೈ ಬೆವರುವುದು, ಮೈ ನಡುಗಿಸುವ ಚಳಿ, ಕೈ ಕಾಲುಗಳು ಹಿಡಿದುಕೊಂಡಂತೆ ಆಗುತ್ತದೆ. ಕಾರ್ಯಕ್ರಮದಲ್ಲಿ ಸಹಾಯಕ ವಾರ್ತಾಧಿಕಾರಿ ಸುರೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿನಾಯಕ ಇದ್ದರು.