ಸಾರಾಂಶ
ಯುವಜನತೆ ಅತಿ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆಯನ್ನು ಮಾಡುತ್ತಿದ್ದು, ಯುವಜನರು ಮತ್ತು ಸಾರ್ವಜನಿಕರು ಮಾದಕ ವಸ್ತು ವ್ಯಸನ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಬೇಕು. ತಂಬಾಕು ಉತ್ಪನ್ನಗಳ ವ್ಯಸನಕ್ಕೆ ಬಲಿಯಾಗಿರುವವರಿಗೆ ಆರೋಗ್ಯ ಇಲಾಖೆಯ ಮೂಲಕ ನಿಕೋಟಿನ್ ಚೂಯಿಂಗ್ ಗಮ್ ನೀಡಿ ವ್ಯಸನದಿಂದ ಹೊರಬರಲು ಸಹಾಯ ಮಾಡಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಈಗಾಗಲೇ ಜಿಲ್ಲೆಯ ಕೆಲವು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರವನ್ನು ಸಹ ತಂಬಾಕು ಮುಕ್ತ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಮುಂದಾಗಿದ್ದು, ಈ ಕಾರ್ಯಕ್ಕೆ ಜಿಲ್ಲೆಯ ಸಮಸ್ತ ನಾಗರಿಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದರು. ಗುರುವಾರ ನಶಾಮುಕ್ತ ಭಾರತ್ ಮತ್ತು ತಂಬಾಕು ಮುಕ್ತ ಯುವ ಅಭಿಯಾನ 3.0 ಹಾಗೂ ಮಾದಕ ವಸ್ತು ವ್ಯಸನ ತಡೆಗಟ್ಟುವ ಕುರಿತು ಜಾಗೃತಿಗಾಗಿ ಆಯೋಜಿಸಿದ್ದ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.ತಂಬಾಕು ಸೇವನೆ ತ್ಯಜಿಸಿ
ಯುವಜನತೆ ಅತಿ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆಯನ್ನು ಮಾಡುತ್ತಿದ್ದು, ಯುವಜನರು ಮತ್ತು ಸಾರ್ವಜನಿಕರು ಮಾದಕ ವಸ್ತು ವ್ಯಸನ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಬೇಕು. ತಂಬಾಕು ಉತ್ಪನ್ನಗಳ ವ್ಯಸನಕ್ಕೆ ಬಲಿಯಾಗಿರುವವರಿಗೆ ಆರೋಗ್ಯ ಇಲಾಖೆಯ ಮೂಲಕ ನಿಕೋಟಿನ್ ಚೂಯಿಂಗ್ ಗಮ್ ನೀಡಿ ವ್ಯಸನದಿಂದ ಹೊರಬರಲು ಸಹಾಯ ಮಾಡಲಾಗುತ್ತಿದೆ. ನಶಾಮುಕ್ತ ಭಾರತ್ ಮತ್ತು ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ವಿಕಲ ಚೇತನರಿಂದ ಬೈಕ್ ರ್‍ಯಾಲಿ ಆಯೋಜಿಸಿದ್ದಾಗ ತಿಳಿಸಿದರು.ಸಂದರ್ಭದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್.ಎಸ್ ಮಹೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜ್ಯೋತಿ ಲಕ್ಷ್ಮಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬಂದಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))