ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಅನಿಷ್ಠ ಪದ್ಧತಿಗಳಲ್ಲಿ ಒಂದಾಗಿರುವ ಬಾಲ ಕಾರ್ಮಿಕರ ಪದ್ಧತಿಯನ್ನು ತಡೆಗಟ್ಟಲು ಪ್ರತಿಯೊಬ್ಬ ಕೈಜೋಡಿಸಬೇಕಾದ ಅಗತ್ಯವಿದೆ ಎಂದು ಜೆಎಂಎಫ್ ಸಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಮಂಜುನಾಥಚಾರಿ ತಿಳಿಸಿದರು.ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಲಸಕ್ಕೆ ನೇಮಿಸಿಕೊಂಡರೆ ಕ್ರಮಬಡತನದ ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಇಂದು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೋಟಲ್, ಕಿರಾಣಿ ಅಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರ್ತಿಸಿ ಶಾಲೆಗೆ ಕಳುಹಿಸುವಂತಹ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ದ ಕಾನೂನು ರೀತ್ಯ ಕ್ರಮಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅನಿಷ್ಠ ಪದ್ಧತಿ ತೊಲಗಲಿಬಾಲಕಾರ್ಮಿಕರ ಪದ್ದತಿಯಿಂದ ಮಕ್ಕಳಿಗೆ ಉಂಟಾಗುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕೆಲಸ ಆಗಬೇಕಾಗಿದೆ ಎಂದ ಅವರು ಸಮಾಜದಿಂದ ಬಾಲಕಾರ್ಮಿಕ ಪದ್ಧತಿಯನ್ನು ಸಮಾಜದಿಂದ ತೊಲಗಿಸುವ ಕೆಲಸಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದರು
ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಜಯಪ್ಪ,ಉಪಾಧ್ಯಕ್ಷ ಸಿ.ರವಿ ವಕೀಲರಾದ ವೆಂಕಟನಾರಾಯಣ,ಬಿಂದು ಕುಮಾರಿ,ನಾಗಭೂಷಣ, ಬಾಲು ನಾಯಕ್,ಮುಖ್ಯ ಶಿಕ್ಷಕ ವೆಂಕಟೇಶ್, ಶಿಕ್ಷಕರಾದ ಕೆ.ವಿ. ಶ್ರೀನಿವಾಸ್ ಮತ್ತಿತರರು ಇದ್ದರು.;Resize=(128,128))
;Resize=(128,128))
;Resize=(128,128))