ಸಾರಾಂಶ
ವಿಜಯಪುರ: ಮಾನವ ಕಳ್ಳ ಸಾಗಣೆ ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದು ರಾಜ್ಯ ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ.ಪ್ರಶಾಂತ ಕಳವಳ ವ್ಯಕ್ತಪಡಿಸಿದರು.
ವಿಜಯಪುರ: ಮಾನವ ಕಳ್ಳ ಸಾಗಣೆ ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದು ರಾಜ್ಯ ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ.ಪ್ರಶಾಂತ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ವಲಯ ರಾಷ್ಟ್ರೀಯ ಯುವ ಯೋಜನೆ, ನಾಗಾರ್ಜುನ ಕಾಲೇಜಿನ ಎನ್ನೆಸ್ಸೆಸ್ ಘಟಕ, ಮಹರಾಷ್ಟ್ರದ ದಿ ಮೊಮೆಂಟ್ ಇಂಡಿಯಾ ಹಾಗೂ ಆಂಧ್ರಪ್ರದೇಶದ ಮದನಪಲ್ಲಿಯ ಗ್ರಾಮ ಜ್ಯೋತಿ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಕಳ್ಳ ಸಾಗಣೆ ಕುರಿತು ಜನಜಾಗೃತಿ ಮೂಡಿಸುವ ಭಿತ್ತಿ ಪತ್ರಗಳ ಮೌನ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳ ೧೧೦ ಸ್ಥಳಗಳಲ್ಲಿ ಮಾನವ ಕಳ್ಳ ಸಾಗಣೆ ಜನಜಾಗೃತಿ ಮೂಡಿಸುವ ಮೌನ ನಡಿಗೆ ಆಯೋಜಿಸಲಾಗಿದೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳಸಾಗಾಣಿಕೆ ಬಲಿಯಾಗುತ್ತಿದ್ದಾರೆ. ಅಪಹೃತ ಮಕ್ಕಳನ್ನು ಅಪರಾಧ ಚಟುವಟಿಕೆ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿಸಲಾಗುತ್ತಿದೆ. ಇಂತಹ ಹೀನ ಕೃತ್ಯ ತಪ್ಪಿಸುವುದು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ. ಅಪರಿಚಿತ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪೊಲೀಸರ ಗಮನಕ್ಕೆ ತರಬೇಕೆಂದು ಹೇಳಿದರು.ಪ್ರಾಧ್ಯಾಪಕ ಡಾ.ಎನ್.ಸುರೇಶ್ ಸ್ವಯಂಸೇವಕರಿಗೆ ಮಾನವ ಕಳ್ಳ ಸಾಗಣೆಯ ಜನಜಾಗೃತಿ ಮೂಡಿಸುವ ಪ್ರತಿಜ್ಞಾವಿಧಿ ಬೋಧಿಸಿದರು. ಮಕ್ಕಳ ರಕ್ಷಣಾಧಿಕಾರಿಗಳಾದ ನವತಾಜ್, ಕೆ.ಎನ್.ಮಂಜುನಾಥ್, ರಮೇಶ್ ಬಾಬು, ನಾಗಾರ್ಜುನ ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ವಿ.ವಿಶ್ವಾಸ್, ಸಹಾಯಕ ಪ್ರಾಧ್ಯಾಪಕಿ ದೀಪಿಕಾ, ಹಿಂದಿ ವಿಭಾಗದ ಸತ್ಯನಾರಾಯಣಪ್ಪ ಹಾಗೂ ಸ್ವಯಂಸೇವಕರು ಹಾಜರಿದ್ದರು.
(ಫೋಟೋ ಕ್ಯಾಫ್ಷನ್)ಮಕ್ಕಳ ಕಳ್ಳ ಸಾಗಾಣಿಕೆ ಕುರಿತು ಜನಜಾಗೃತಿ ಮೂಡಿಸುವ ಭಿತ್ತಿ ಪತ್ರಗಳ ಮೌನನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಡಾ. ವಿ.ಪ್ರಶಾಂತ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.