ಸಾರಾಂಶ
ದೇಶದಲ್ಲಿ ಆಡಳಿತ ಸರ್ಕಾರಗಳು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಬಿಡಬೇಕು. ಬದಲಿಗೆ ಆರ್ಥಿಕ ಸಂಕಷ್ಟಕ್ಕೆ ಸುಧಾರಿಸಲು ನೆರವಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಹೇಳಿದ್ದಾರೆ.
ಜಗಳೂರು: ದೇಶದಲ್ಲಿ ಆಡಳಿತ ಸರ್ಕಾರಗಳು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಬಿಡಬೇಕು. ಬದಲಿಗೆ ಆರ್ಥಿಕ ಸಂಕಷ್ಟಕ್ಕೆ ಸುಧಾರಿಸಲು ನೆರವಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಹೇಳಿದರು.
ತಾಲೂಕಿನ ಅಗಸನಹಳ್ಳಿಯಲ್ಲಿ ಮಂಗಳವಾರ ಸಂಘಟನೆಯ ಗ್ರಾಮಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಬಗರ್ ಹುಕುಂ ಕಾಯ್ದೆಯಡಿ 57 ಅರ್ಜಿಗಳ ವಿಲೇವಾರಿಗೊಳಿಸಿ, ಸಾಗುವಳಿ ಚೀಟಿ ವಿತರಿಸಬೇಕು. ವಿದ್ಯುತ್ ಪರಿವರ್ತಕಗಳನ್ನು ಸಕಾಲದಲ್ಲಿ ರೈತರಿಗೆ ಪೂರೈಸಬೇಕು. ಬೆಳೆಗೆ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲಬೆಲೆ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ರೈತರ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಗಳಿಂದ ರೈತರು ಒಗ್ಗಟ್ಟಾಗಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.ಸಂಘಟನೆ ತಾಲೂಕು ಪ್ರಧಾನ ಕಾರ್ಯದರ್ಶಿ ರಾಜನಹಟ್ಟಿ ರಾಜು ಮಾತನಾಡಿ, ತಾಲೂಕಿನಲ್ಲಿ ಸಮಗ್ರ ನೀರಾವರಿ ಜಾರಿಗೊಳಿಸಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿ ರೈತರು ಆರ್ಥಿಕ ಕಂಗಾಲಾಗಿದ್ದಾರೆ.ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಮರುಕಳಿಸದಂತೆ ಅಧಿಕಾರಿಗಳು ಜಾಗೃತರಾಗಬೇಕು.ರೈತಸಮುದಾಯಕ್ಕೆ ಅನ್ಯಾಯವಾದರೆ ರೈತ ಸಂಘಟನೆಯಿಂದ ಹೊರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಪಂ ಅಧ್ಯಕ್ಷ ರೇವಣಸಿದ್ದಪ್ಪ, ತಾಲೂಕು ಅಧ್ಯಕ್ಷ ಚಿರಂಜೀವಿ ಸಿಎಂಹೊಳೆ, ಪದಾಧಿಕಾರಿಗಳಾದ ರಂಗಪ್ಪ, ಪರಸಪ್ಪ, ಅನಿಲ್, ತಿಪ್ಪೇಸ್ವಾಮಿ, ಕೆಂಚಪ್ಪ, ಅರುಣ್ ಕುಮಾರ್ ಅಗಸನಹಳ್ಳಿ, ದಾಸಪ್ಪ, ನಾಗೇಶ್, ಮಹಾಂತೇಶ್, ಕೊಟ್ರೇಶ್, ಹನುಮಂತಪ್ಪ ಮತ್ತಿತರರು ಇದ್ದರು.- - -