ಮಾನವ ಕಳ್ಳ ಸಾಗಾಣಿಕೆಯಲ್ಲಿ ಸಿಲುದವರಿಗೆ ನೆರವಾಗಿ: ನ್ಯಾ.ವೈದ್ಯ ಶ್ರೀಕಾಂತ್

| Published : Aug 01 2024, 12:28 AM IST

ಮಾನವ ಕಳ್ಳ ಸಾಗಾಣಿಕೆಯಲ್ಲಿ ಸಿಲುದವರಿಗೆ ನೆರವಾಗಿ: ನ್ಯಾ.ವೈದ್ಯ ಶ್ರೀಕಾಂತ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಮಾನವ ಕಳ್ಳ ಸಾಗಾಣಿಕೆಯಲ್ಲಿ ಸಿಲುಕಿರುವ ವ್ಯಕ್ತಿಗಳಿಗೆ ನೆರವಿನ ಹಸ್ತ ಚಾಚಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮತ್ತು ನ್ಯಾ. ವೈದ್ಯ ಶ್ರೀಕಾಂತ್ ಹೇಳಿದ್ದಾರೆ.

ತರೀಕೆರೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಾನವ ಕಳ್ಳ ಸಾಗಾಣಿಕೆಯಲ್ಲಿ ಸಿಲುಕಿರುವ ವ್ಯಕ್ತಿಗಳಿಗೆ ನೆರವಿನ ಹಸ್ತ ಚಾಚಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮತ್ತು ನ್ಯಾ. ವೈದ್ಯ ಶ್ರೀಕಾಂತ್ ಹೇಳಿದ್ದಾರೆ.ಮಂಗಳವಾರ ಸ.ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ಆಡಳಿತ, ತಾಲೂಕು ಪಂಚಾಯತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಏರ್ಪಡಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಬಗ್ಗೆ ಮಾಹಿತಿ ಬಂದ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಬೇಕು. ತಂದೆ ತಾಯಿಯೇ ನಿಮ್ಮ ಆದರ್ಶ ವ್ಯಕ್ತಿ ಆಗಬೇಕು ಎಂದು ಹೇಳಿದರು. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಿದ್ದಪ್ಪ ಟಕ್ಕಳಕಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಜಿಎಸ್ ಸುಬ್ರಹ್ಮಣ್ಯ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಮಿಕ ನಿರೀಕ್ಷಕ ಮಹದೇವಪ್ಪ, ನ್ಯಾಯಾಧೀಶ ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ಶೇಖರ್ ನಾಯಕ್, ಹಿರಿಯ ವಕೀಲ ಎಸ್.ಸುರೇಶ್ ಚಂದ್ರ, ಪಿಎಸ್ಐ ನಂದೀಶ್, ಸಿಡಿಪಿಒ ಚರಣ್ ರಾಜ್, ದ್ರಾಕ್ಷಾಯಿಣಿ ಬಾಯಿ, ಜಗದೀಶ್ ಭಾಗವಹಿಸಿದ್ದರು.

30ಕೆಟಿಆರ್.ಕೆ12ಃ

ತರೀಕೆರೆಯಲ್ಲಿ ಏರ್ಪಡಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟನೆಯನ್ನು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮತ್ತು ನ್ಯಾ. ವೈದ್ಯ ಶ್ರೀಕಾಂತ್ ನೆರವೇರಿಸಿದರು. ನ್ಯಾ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ಶೇಖರ್ ನಾಯಕ್, ಹಿರಿಯ ವಕೀಲರಾದ ಎಸ್.ಸುರೇಶ್ ಚಂದ್ರ, ಜಿ.ಸುಬ್ರಹಣ್ಯ ಮತ್ತಿತರರು ಇದ್ದರು.