ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಿಬರುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸ ಬೇಕೆಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ ಸೂಚಿಸಿದ್ದಾರೆ.ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ
ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಿತಿ ಸದಸ್ಯ ಮೊಹಮದ್ ಕುಟ್ಟಿ ಮಾತನಾಡಿ ಲಿಂಗದಹಳ್ಳಿಯಿಂದ ಬೀರೂರು ಮತ್ತಿತರ ಕಡೆಗೆ ಶಾಲಾ ಕಾಲೇಜುಗಳಿಗೆ ನಿತ್ಯ ಹೋಗಿಬರುವ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8. 30ಕ್ಕೆಸಾರಿಗೆ ಬಸ್ಸುಗಳಿಲ್ಲದೆ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತಲುಪಲು ತೊಂದರೆಯಾಗುತ್ತಿದೆ ಎಂದು ಸಭೆ ಗಮನಕ್ಕೆ ತಂದಾಗ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ ಅವರು ಕೂಡಲೇ ಶಾಲಾ ಕಾಲೇಜುಗಳಿಗೆ ಹೋಗಿಬರಲು ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ಸುಗಳನ್ನು ಸಮಯಕ್ಕೆ ಸರಿಯಾಗಿ ವ್ವವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಸಮಿತಿ ಸದಸ್ಯ ಪ್ರಸನ್ನ ಮಾತನಾಡಿ ಎಷ್ಟು ಸಾರಿ ಪೋನ್ ಮಾಡಿದರೂ ಮೆಸ್ಕಾಂ ಅಧಿಕಾರಿಗಳು ಪೋನನ್ನು ಸ್ವೀಕರಿಸು ವುದಿಲ್ಲ, ಇದರಿಂದ ಬಹಳ ಸಮಸ್ಯೆಯಾಗುತ್ತಿದೆ ಎಂದು ಸಭೆ ಗಮನಕ್ಕೆ ತಂದಾಗ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ ಅವರು ಮಾತನಾಡಿ ಪೋನ್ ರಿಸೀವ್ ಮಾಡಿ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.ಲಿಂಗದಹಳ್ಳಿ ಭಾಗದಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ, ಮಳೆ ಗಾಳಿ ಇಲ್ಲದಿದ್ದರೂ ವಿದ್ಯುತ್ ಸರಬರಾಜು ನಿಂತು ಹೋಗುತ್ತದೆ ಎಂದು ಸಮಿತಿ ಸದಸ್ಯರು ಹೇಳಿದರು.ಮೆಸ್ಕಾಂ ಎಇಇ ಮಂಜುನಾಥ್ ಮಾತನಾಡಿ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದೆ. ಖಂಡಿತವಾಗಿ ಪೋನ್ ಗಳನ್ನು ರಿಸೀವ್ ಮಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.ಸಮಿತಿ ಸದಸ್ಯರಾದ ಆನಂದ್ ರಂಗೇನಹಳ್ಳಿ, ಎಚ್.ಓ.ಪ್ರಸನ್ನ, ಮಣಿಕಂಠ, ಮಾಲತೇಶ, ಎನ್.ಸಿ.ಶ್ರೀಧರ್, ವಿನೋದ್ ರಾಜ್, ದೇವರಾಜ್, ಟಿ.ಎಸ್. ಜ್ಞಾನಮೂರ್ತಿ, ಭಾಗ್ಯಲಕ್ಷ್ಮಿ, ಲಕ್ಷ್ಮೀಬಾಯಿ ಸಮಿತಿ ಸದಸ್ಯರು ವಿವಿಧ ಚರ್ಚೆಯಲ್ಲಿ ಭಾಗವಹಿಸಿದ್ದರು. ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ.ಯೋಜನಾಧಿಕಾರಿ ಗಿರೀಶ್, ಚಂದ್ರಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
--
15ಕೆಟಿಆರ್.ಕೆ.3ಃ
ತರೀಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.