ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ

| Published : May 13 2024, 12:05 AM IST

ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯೂ ಎಂದಿಗೂ ಆದರ್ಶಪ್ರಾಯ

ಮುಳಗುಂದ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜನಮಾನಸದಲ್ಲಿ ತನ್ನ ಭಕ್ತಿ ಹಾಗೂ ಕಾಯಕದಿಂದ ಮನೆ ಮಾತಾಗಿದ್ದಾಳೆ. ಕೌಟುಂಬಿಕ ಸಂಕಷ್ಟ ಮೆಟ್ಟಿ ನಿಂತು, ಆದರ್ಶ ಮೌಲ್ಯಗಳನ್ನು ಬದುಕಿನಲ್ಲಿ ರೂಢಿಸಿಕೊಂಡು ಸಾಮಾಜಿಕ ಹಾಗೂ ಧಾರ್ಮಿಕ ಚಿಂತನೆಯಲ್ಲಿ ಸಾಧನೆಗೈದ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ ಎಂದು ಎಂ.ಡಿ. ಬಟ್ಟೂರ ಹೇಳಿದರು.

ಪಟ್ಟಣದ ರಡ್ಡಿ ಸಮಾಜ ಬಾಂಧವರಿಂದ ಎಂ.ಡಿ. ಬಟ್ಟೂರ ಅವರ ಮನೆಯಲ್ಲಿ ನಡೆದ ಶಿವ ಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಲ್ಲಿಕಾರ್ಜುನನ್ನು ತನ್ನ ಆರಾಧ್ಯ ದೈವವಾಗಿ ಆರಾಧಿಸಿ,ಅವರನ್ನು ಸಾಕ್ಷಾತ್ಕರಿಸಿಕೊಂಡು ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚ ತ್ಯಾಗ ಮಾಡಿ ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದರು ಎಂದರು.

ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯೂ ಎಂದಿಗೂ ಆದರ್ಶಪ್ರಾಯವಾಗಿದೆ ಎಂದರು.

ಈ ವೇಳೆ ಕಾಶಿನಾಥ ಮರಿದೇವರಮಠ, ಫಕ್ಕೀರಯ್ಯ ಅಮೋಘಿಮಠ, ಬಸವರಾಜ ಬಾತಾಖಾನಿ, ಜಗದೀಶ ಬಟ್ಟೂರ ಸೇರಿದಂತೆ ಸುತ್ತಮುತ್ತಲಿ ಗ್ರಾಮಗಳ ರಡ್ಡಿ ಸಮಾಜ ಬಾಂಧವರು ಇದ್ದರು.