ಸಾರಾಂಶ
ಹೇಮರೆಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸ ಮಾಡಬೇಕು.
ಕುಷ್ಟಗಿ:
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಾನ, ದಾಸೋಹ ಹಾಗೂ ನಿಸ್ವಾರ್ಥ ಭಕ್ತಿಗೆ ಹೆಸರಾಗಿದ್ದಾರೆ ಎಂದು ಕಂದಾಯ ನಿರೀಕ್ಷಕ ಅಬ್ದುಲ್ ರಜಾಕ್ ಹೇಳಿದರು.ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹೇಮರೆಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸ ಮಾಡಬೇಕು. ತಾವು ಸಾರಿದ ಮೌಲ್ಯ ಮತ್ತು ತತ್ವಗಳಿಗೆ ಬದ್ಧರಾಗಿ ನಡೆದುಕೊಂಡ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.ಈ ವೇಳೆ ರೆಡ್ಡಿ ಸಮಾಜದ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಜಗದೀಶ ಕಂದಕೂರ, ಲಿಂಗರಾಜ ಹಂಚಿನಾಳ, ಶರಣಪ್ಪ ಹುಡೇದ, ನಾಗಪ್ಪ ಚೂರಿ, ಚಂದ್ರು ಪೂಜಾರ, ಶಶಿಕುಮಾರ ಸೊಪ್ಪಿಮಠ, ಪ್ರಜ್ವಲ್ ಹಿರೇಮನಿ ಸೇರಿದಂತೆ ಅನೇಕರು ಇದ್ದರು.