ಮಹಿಳಾ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನೂತನ ನಿರ್ದೇಶಕಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೇಲೂರು

ಕರ್ನಾಟಕ ಸ್ಟೇಟ್ ವುಮೆನ್ ಕೋ–ಆಪರೇಟಿವ್ ಫೆಡರೇಶನ್ ಸಂಸ್ಥೆಗೆ ಎಂ.ವಿ. ಹೇಮಾವತಿ ಮಂಜುನಾಥ್ ಅವರು ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಮಹಿಳಾ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನೂತನ ನಿರ್ದೇಶಕಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಬಿಬಿ ಶಿವರಾಜ್, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಬಿಎಸ್ ಆರಾಧ್ಯ. ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕ ಸಂಘದ ಅಧ್ಯಕ್ಷ ಕೇಬಲ್ ವಿಜಯ್ ಕುಮಾರ ಸೇರಿದಂತೆ ಇತರ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ‌.