ಗ್ರಾಮೀಣ ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ಕಬ್ಬಡ್ಡಿ ಅವಶ್ಯಕ

| Published : Sep 08 2025, 01:00 AM IST

ಸಾರಾಂಶ

ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವ ಬೆನ್ನಲ್ಲೇ ಕಬ್ಬಡ್ಡಿ ಪಂದ್ಯಾವಳಿಯಂತಹ ಕ್ರೀಡೆಗಳಿಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರೋತ್ಸಾಹ

ಕನ್ನಡಪ್ರಭ ವಾರ್ತೆ ನಂಜನಗೂಡುಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಿ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲು ಕಬ್ಬಡ್ಡಿ ಪಂದ್ಯಾವಳಿ ಆಯೋಜನೆ ಅವಶ್ಯಕ ಎಂದು ಮುಡಾ ಮಾಜಿ ಅಧ್ಯಕ್ಷ ಎಚ್.ಎನ್. ವಿಜಯ್ ಕುಮಾರ್ ಹೇಳಿದರು.ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಗ್ರಾಮ ದೇವತೆ ಮಾಲರಸಮ್ಮ ಹಬ್ಬದ ಅಂಗವಾಗಿ ವಿಸ್ಮಯ ಕಬ್ಬಡ್ಡಿ ತಂಡ ಹಾಗೂ ಹೆಮ್ಮರಗಾಲ ಸೋಮಣ್ಣ ಸ್ನೇಹ ಬಳಗ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವ ಬೆನ್ನಲ್ಲೇ ಕಬ್ಬಡ್ಡಿ ಪಂದ್ಯಾವಳಿಯಂತಹ ಕ್ರೀಡೆಗಳಿಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರೋತ್ಸಾಹ, ನೆರವು ದೊರೆಯುತ್ತಿರುವ ಹಿನ್ನೆಲೆಯಲ್ಲಿ ನೆಪಥ್ಯಕ್ಕೆ ಸರಿದಿದ್ದ ಕಬಡ್ಡಿ ಕ್ರೀಡೆಯು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಜಿಲ್ಲಾ ಹಾಗೂ ರಾಜ್ಯಮಟ್ಟಗಳಲ್ಲಿ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಬೇಕಿದೆ ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಮಾತನಾಡಿ, ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಇಂತಹ ಜಿಲ್ಲಾ ಕಬಡ್ಡಿ ಪಂದ್ಯಾವಳಿ ನಡೆಯುವುದರಿಂದ ಕ್ರೀಡಾ ಕ್ಷೇತ್ರವು ಬಲಿಷ್ಠವಾಗಲಿದೆ. ಕ್ರೀಡಾಪಟುಗಳು ಕ್ರೀಡಾಮನೋಭಾವನೆ ಬೆಳೆಸಿಕೊಂಡು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದರು.ಬಿಜೆಪಿ ಮುಖಂಡ ಹೆಮ್ಮರಗಾಲ ಸೋಮಣ್ಣ ಮಾತನಾಡಿ, ಹೆಮ್ಮರಗಾಲ ಗ್ರಾಮವು ಕ್ರೀಡಾ ಕ್ಷೇತ್ರದಲ್ಲಿ ಪ್ರಖ್ಯಾತಿಯನ್ನು ಪಡೆದಿತ್ತು, ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಸಲುವಾಗಿ ಹಾಗೂ. ಗ್ರಾಮ ದೇವತೆ ಹಬ್ಬದಲ್ಲಿ ಕ್ರೀಡೆ ಆಯೋಜನೆ ಮೂಲಕ ಗ್ರಾಮದಲ್ಲಿ ಏಕತೆಯ ಹಾಗೂ ಎಲ್ಲರಲ್ಲೂ ಸಾಮರಸ್ಯ ಭಾವನೆಯನ್ನು ಮೂಡಿಸುವ ಸಲುವಾಗಿ ಗ್ರಾಮ ದೇವತೆ ಮಾಲರಸಮ್ಮ ಹಬ್ಬದ ಅಂಗವಾಗಿ ಪ್ರತಿ ವರ್ಷ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಈ ಬಾರಿ ಸತತ ನಾಲ್ಕನೇ ವರ್ಷ ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದು, ಈ ಪಂದ್ಯಾವಳಿಯಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಕ್ರೀಡಾ ತಂಡಗಳು ಆಗಮಿಸಿವೆ. ಕಬಡ್ಡಿ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ ಎಂದರು.ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿ ಮೆರೆಯಬೇಕು ಎಂದರು.ಈ ವೇಳೆ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಎಂ. ಕೆಂಪಣ್ಣ, ಮುಖಂಡರಾದ ಮಸಗೆರಾಜು, ಮಲ್ಲೇಶ್, ಬದನವಾಳು ಮಂಜುನಾಥ್, ಮಹೇಶ್, ಹಳೆಪುರ ರಂಗನಾಥ್, ನಾಗರತ್ನ, ರಾಮಶೆಟ್ಟಿ, ಕಾಳಪ್ಪ, ವರದನಾಯಕ, ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಕೃಷ್ಣ, ತಾಪಂ ಮಾಜಿ ಸದಸ್ಯ ಬಿ.ಎಸ್. ರಾಮು, ರಂಗಸ್ವಾಮಿ, ಮಣಿಕಂಠ, ರಾಜು, ಸಿದ್ದು, ಧನಂಜಯ, ರಾಜೇಶ್ ಮೊದಲಾದವರು ಇದ್ದರು.