ಸಾರಾಂಶ
ಮೈಸೂರು
ದಸರಾ ಮಹೋತ್ಸವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಅ. 4 ರಿಂದ 6 ರವರೆಗೆ ಬೆಳಿಗ್ಗೆ 7 ಗಂಟೆಯಿಂದ ಪುರಭವನ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆಜಾವಾ ಮೋಟಾರ್ ಬೈಕ್ ಸವಾರಿಅ. 4 ರಂದು ಪಾರಂಪರಿಕ ಜಾವಾ ಮೋಟಾರ್ ಬೈಕ್ ಸವಾರಿ ಏರ್ಪಡಿಸಿದೆ. 25 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು/ ಯುವಕರು ಹಾಗೂ ಪುರುಷರು ಭಾಗವಹಿಸಬಹುದಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 10 ಮಂದಿ ಜಾವ ಮೋಟಾರ್ ಬೈಕುವುಳ್ಳ ಆಸಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು. ಮೋಟಾರ್ ಬೈಕ್ ಸವಾರಿಯೂ ಪುರಭವನದಿಂದ ಪ್ರಾರಂಭವಾಗಿ, ದೊಡ್ಡ ಗಡಿಯಾರ ಗೋಪುರ, ಫ್ರೀ ಮೇಸನ್ಸ್ ಕ್ಲಬ್, 10ನೇ ಚಾಮರಾಜ ವೃತ್ತ, ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲಾನ್ಸ್ ಡೌನ್ ಕಟ್ಟಡ, ಬನುಮಯ್ಯ ಶಿಕ್ಷಣ ಸಂಸ್ಥೆ, ಮೈಸೂರು ಮಹಾನಗರ ಪಾಲಿಕೆ, ಮಹಾರಾಜ ಸಂಸ್ಕೃತ ಪಾಠಶಾಲೆ, ಸಾರ್ವಜನಿಕ ಕಚೇರಿಗಳ ಸಂಕೀರ್ಣ, ಗನ್ ಹೌಸ್, ಶಿವರಾತ್ರೀಶ್ವರ ಮಠದ ಆಡಳಿತ ಕಟ್ಟಡ, ಆರ್ ಗೇಟ್, ಕರ್ಜನ್ ಪಾರ್ಕ್, ಬ್ಯಾಂಡ್ ಹೌಸ್, ಆಡಳಿತ ತರಬೇತಿ ಸಂಸ್ಥೆ, ಕೆ.ಎಸ್.ಆರ್.ಪಿ ಕಟ್ಟಡ ಮೈಸೂರು ಪ್ರವೇಶದ್ಧಾರ, ಲಲಿತ್ ಮಹಲ್, ಪೋಸ್ಟಲ್ ಟ್ರೈನಿಂಗ್ ಸೆಂಟರ್, ವಸಂತ್ ಮಹಲ್ ಹಾದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹತ್ತಿರ ಮುಕ್ತಾಯಗೊಳ್ಳಲಿದೆ.ಮೂರು ದಿನಗಳನ್ನು ನಡೆಯುವ ಕಾರ್ಯಕ್ರಮಗಳಲ್ಲಿ ನುರಿತ ಇತಿಹಾಸ ಹಾಗೂ ಪುರಾತತ್ವ ತಜ್ಞರುಗಳು ಮೈಸೂರಿನ ವಿವಿಧ ಪಾರಂಪರಿಕ ಕಟ್ಟಡಗಳ ಪರಿಚಯವನ್ನು ಮಾಡಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ. 30ರವರೆಗೆ ದೊಡ್ಡಕೆರೆ ಮೈದಾನದ ಕರ್ನಾಟಕದ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರನ್ನು ನೇರವಾಗಿ ಅಥವಾ ದೂರವಾಣಿ ಅಥವಾ ಕಚೇರಿಯ ಇ-ಮೇಲ್ ವಿಳಾಸ commramh@yahoo.in ಮತ್ತು ddheritagemysore@gmail.com ನ ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು .
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸ್ಥಿರ ದೂ. ಸಂ:0821-2424671/ 2424673 ಹಾಗೂ ಉಪ ನಿರ್ದೇಶಕಿ (ಪರಂಪರೆ) ಡಾ.ಸಿ.ಎನ್.ಮಂಜುಳಾ ಅವರ ಮೊ..ಸಂ:83102 50733 ಮತ್ತು ಪ್ರಥಮ ದರ್ಜೆ ಸಹಾಯಕ ಎಸ್. ಶಶಿಧರ ಅವರ ಮೊ..ಸಂ: 7349057976 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.-- ಪಾರಂಪರಿಕ ಟಾಂಗಾ ಸವಾರಿ--
ಅ. 5 ರಂದು "ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗಾಗಿ ಪಾರಂಪರಿಕ ಟಾಂಗಾ ಸವಾರಿಯ ಆಯೋಜಿಸಲಾಗಿದೆ. 25 ರಿಂದ 55 ವರ್ಷ ವಯೋಮಿತಿಯುಳ್ಳ ದಂಪತಿಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 50 ಜೋಡಿಗಳಿಗೆ ಮಾತ್ರ ಆದ್ಯತೆ ಮೇರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಟಾಂಗಾ ಸವಾರಿಯು ಪುರಭವನದಿಂದ ಪ್ರಾರಂಭವಾಗಿ ದೊಡ್ಡ, ಗಡಿಯಾರ ಗೋಪುರ, ಫ್ರೀ ಮೇಸನ್ಸ್ ಕ್ಲಬ್, 10ನೇ ಚಾಮರಾಜ ಒಡೆಯರ್ ವೃತ್ತ, ವಿಲಾಸ ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಕಟ್ಟಡ, ಜಗನ್ ಮೋಹನ ಅರಮನೆ, ಪರಕಾಲ ಮಠ, ಶೇಷಾದ್ರಿ ಹೌಸ್- ವಾಣಿಜ್ಯ ತೆರಿಗೆ ಕಚೇರಿ, ಪದ್ಮಾಲಯ, ಹಳೇ ಜಿಲ್ಲಾಧಿಕಾರಿಗಳ ಕಛೇರಿ, ಕ್ರಾಫರ್ಡ್ ಹಾಲ್, ಹೋಟೆಲ್ ಮೆಟ್ರೊಪೋಲ್, ಮೈಸೂರು ರೈಲ್ವೆ ಜಂಕ್ಷನ್, ಕೃಷ್ಣ ರಾಜೇಂದ್ರ ಆಸ್ಪತ್ರೆ(ಕೆ.ಆರ್.ಆಸ್ಪತೆ) ವೃತ್ತ, ಮೈಸೂರು ಮೆಡಿಕಲ್ ಕಾಲೇಜು, ಆಯುರ್ವೇದಿಕ್ ಆಸ್ಪತ್ರೆ, ಚಾಮರಾಜೇಂದ್ರ ಟೆಕ್ನಿಕಲ್ ಇನ್ಸಿಟಿಟ್ಯೂಟ್, ಕಾವೇರಿ ಎಂಪೋರಿಯಮ್, ಗಾಂಧಿ ವೃತ್ತ ಹಾದು ಪುರಭವನ ಹತ್ತಿರ ಮುಕ್ತಾಯಗೊಳ್ಳಲಿದೆ.-- ಪಾರಂಪರಿಕ ನಡಿಗೆ--ಅ.6 ರಂದು "ಪಾರಂಪರಿಕ ನಡಿಗೆ " ಆಯೋಜಿಸಲಾಗಿದೆ. 18 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು/ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 200 ಜನರಿಗೆ ಅವಕಾಶ ನೀಡಲಾಗುವುದು. ನಡಿಗೆಯು ಪುರಭವನದಿಂದ ಪ್ರಾರಂಭವಾಗಿ, ಸಿಲ್ವರ್ ಜೂಬಿಲಿ ಕ್ಲಾಕ್ ಟವರ್, ಫ್ರಿಮೇಸನ್ಸ್ ಕ್ಲಬ್, ಹತ್ತನೆ ಚಾಮರಾಜ ಒಡೆಯರ್ ವೃತ್ತ, ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಚಿಕ್ಕ ಗಡಿಯಾರ, ದೇವರಾಜ ಮಾರುಕಟ್ಟೆ, ಕೃಷ್ಣರಾಜೇಂದ್ರ ಆಸ್ಪತ್ರೆ ಮೈಸೂರು ಮೆಡಿಕಲ್ ಕಾಲೇಜು, ಸರ್ಕಾರಿ ಆಯುರ್ವೇದ ಕಾಲೇಜು, ಚಾಮರಾಜೇಂದ್ರ ಟೆಕ್ನಿಕಲ್ ಇನ್ಸ್ಟಿಟ್ಯೂಟ್ ಕಾವೇರಿ ಎಂಪೋರಿಯಮ್, ಗಾಂಧಿ ವೃತ್ತ ಹಾದು ಪುರಭವನ ಹತ್ತಿರ ಮುಕ್ತಾಯಗೊಳ್ಳಲಿದೆ.