ಸಾರಾಂಶ
ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಯಕ್ಷಗಾನ ಕಲೆಗೆ ಪ್ರಾಚೀನ ಇತಿಹಾಸವಿದೆ. ಅದು ಬೆಳೆದು ಬಂದ ಬಗೆ ನಿಜಕ್ಕೂ ಆಶ್ಚರ್ಯ ತರುತ್ತಿದೆ. ಇಂದು ಯಕ್ಷಗಾನ ಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಇದೆ. ಶಾಲಾ ಕಾಲೇಜುಗಳಲ್ಲಿಯೂ ಮಕ್ಕಳು ಅದರಲ್ಲಿ ಭಾಗವಹಿಸುವುದನ್ನು ನೋಡಿದರೆ ಮುಂದೆ ಅದು ಇನ್ನೂ ಹೆಚ್ಚು ಜನಪ್ರಿಯವಾಗಲಿದೆ. ಈ ನಿಟ್ಟಿನಲ್ಲಿ ಉಡುಪಿಯ ಇಂದ್ರಾಳಿಯ ಯಕ್ಷಗಾನ ಕೇಂದ್ರ ಕಲೆಯ ಪ್ರೋತ್ಸಾಹಕ್ಕೆ ಶ್ರಮಿಸುತ್ತಿದೆ. ಯಕ್ಷಗಾನ ಕೇಂದ್ರಕ್ಕೆ ಮಾಹೆಯ ಬೆಂಬಲ ನಿರಂತರವಾಗಿ ಇದೆ. ಪರಂಪರೆಯ ಯಕ್ಷಗಾನ ಕಲೆಗೆ ಜನ ಬೆಂಬಲ ನೀಡಬೇಕು ಎಂದು ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು.
ಅವರು ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.೨೦೨೪ನೇ ಸಾಲಿನ ಪ್ರಶಸ್ತಿಯನ್ನು ಸ್ವೀಕರಿಸಿದ ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರಿ ಮಾತನಾಡಿ, ಗುರು ವೀರಭದ್ರ ನಾಯಕರ ಶಿಷ್ಯನಾಗಿ ತಾನು ಪಡೆದುಕೊಂಡ ಅನುಭವ ಹಾಗೂ ಡಾ.ಕೋಟ ಶಿವರಾಮ ಕಾರಂತರ ಪ್ರೋತ್ಸಾಹವನ್ನು ಸ್ಮರಿಸಿದರು.ಮಾಹೆಯ ಸಹಕುಲಪತಿ ಡಾ.ನಾರಾಯಣ ಸಭಾಹಿತ್ ಸಮಾರಂಭ ಉದ್ಘಾಟಿಸಿದರು. ಗುರು ಉಮೇಶ್ ಸುವರ್ಣ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ. ಜಿ.ಶಂಕರ್, ಉದ್ಯಮಿ ಪುರುಷೋತ್ತಮ ಶೆಟ್ಟಿ ಹಾಗೂ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಲಹಾ ಸಮಿತಿ ಸದಸ್ಯ ಭುವನ ಪ್ರಸಾದ ಹೆಗ್ಡೆ ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))